25.2 C
Udupi
Thursday, July 10, 2025
spot_img
spot_img
HomeBlogಕ್ರೈಸ್ಟ್ ಕಿಂಗ್: ಪತ್ರಿಕಾ ದಿನಾಚರಣೆ

ಕ್ರೈಸ್ಟ್ ಕಿಂಗ್: ಪತ್ರಿಕಾ ದಿನಾಚರಣೆ

ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರಪಾಲ್ ನಕ್ರೆ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ
ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಶ್ರಾಂತ ಪತ್ರಕರ್ತ
ಬಿಪಿನ್‌ಚಂದ್ರ ಪಾಲ್, ನಕ್ರೆ ಅವರು ಆಗಮಿಸಿದ್ದರು. ಅವರು ದೀಪ
ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು “ಪ್ರಜಾಪ್ರಭುತ್ವ
ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ,
ಪತ್ರಿಕೆಗೆ ಹಾಗೂ ಪತ್ರಕರ್ತರಿಗೆ ಪತ್ರಿಕಾ ಧರ್ಮವೇ
ಧರ್ಮವಾಗಬೇಕು. ಆಧುನಿಕ ಕಾಲದಲ್ಲಿ ಪತ್ರಕರ್ತರ ಕಾರ್ಯ
ಅನೇಕ ಸವಾಲುಗಳಿಂದ ಕೂಡಿದೆ. ಆದರೆ ಅವುಗಳಿಗೆ ಹೆದರದೆ
ನೇರ ಹಾಗೂ ದಿಟ್ಟತನದಿಂದ ವರದಿಗಾರಿಕೆ ಮಾಡಬೇಕು.
ಪತ್ರಕರ್ತರು ಎಲ್ಲರವರಾಗಿರಬೇಕು ಹೊರತು ಯಾರೋ ಒಬ್ಬ
ವ್ಯಕ್ತಿಯವನಾಗಿರಬಾರದು” ಎಂದು ಹೇಳಿದರು. ಕಾರ್ಯಕ್ರಮದ
ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ನ ಸದಸ್ಯ
ಡಾ.ಪೀಟರ್ ಫೆರ್ನಾಂಡಿಸ್ ಮಾತನಾಡಿ “ಈ ಸಮಾಜದಲ್ಲಿ ಧ್ವನಿಯಿಲ್ಲದವರ
ಧ್ವನಿಯಾಗಿರುವವರು ಪತ್ರಕರ್ತರು. ಇಂದಿನ ಸಂಕೀರ್ಣ
ಸಮಾಜದಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳ ಭರಾಟೆಯ
ನಡುವಿನಲ್ಲಿ ಪತ್ರಿಕೆಗಳು ಇಂದಿಗೂ ವಿಶ್ವಾಸಾರ್ಹತೆಯನ್ನು
ಉಳಿಸಿಕೊಂಡಿವೆ. ದೇಶದಲ್ಲಿರುವ ಪ್ರಜೆಗಳಿಗೆ ಸೇವೆ ಸಲ್ಲಿಸುವುದೇ
ದೇಶಪ್ರೇಮ. ಈ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದು
ನಿಜವಾಗಿಯೂ ಅವರು ಅಭಿನಂದನಾರ್ಹರು” ಎಂದು ಹೇಳಿದರು.
ಇನ್ನೋರ್ವ ಅತಿಥಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ
ಸಂಘದ ಅಧ್ಯಕ್ಷರಾದ ಮಹಮ್ಮದ್ ಷರೀಫ್ ಅವರು ಮಾತನಾಡಿ “
ಪತ್ರಕರ್ತರು ಸುದ್ದಿಯ ಬಗ್ಗೆ ಸಮಗ್ರ ವಸ್ತುನಿಷ್ಟ ಮಾಹಿತಿ
ಸಂಗ್ರಹಿಸಿ ವಿಶ್ಲೇಷಿಸಿ ವರದಿ ಮಾಡಬೇಕು. ರಾಗ ದ್ವೇಷ
ಪಕ್ಷಪಾತಗಳಿಲ್ಲದೆ ಪತ್ರಿಕಾ ಧರ್ಮ ಹಳಿ ತಪ್ಪದಂತೆ
ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು. ಈ ಸಂದರ್ಭದಲ್ಲಿ
ಮಾಧ್ಯಮಬಿAಬ ಪತ್ರಿಕೆಯ ಹಿರಿಯ ವರದಿಗಾರ ಸತೀಶ ಎಚ್ ಶೆಟ್ಟಿ

ಅವರನ್ನು ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ
ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ಸತೀಶ ಶೆಟ್ಟಿ ಅವರು ತಮ್ಮ
ವರದಿಗಾರಿಕೆಯ ಅನುಭವವನ್ನು ಹಂಚಿಕೊAಡರು. ಈ
ಸಂದರ್ಭದಲ್ಲಿ ಹಾಜರಿದ್ದ ವಿವಿಧ ಪತ್ರಿಕೆಗಳ ಪತ್ರಕರ್ತರು,
ವರದಿಗಾರರು, ಛಾಯಾಗ್ರಾಹಕರನ್ನು ನೆನಪಿನ ಕಾಣಿಕೆ ನೀಡಿ
ಗೌರವಿಸಲಾಯಿತು. ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮೀ ನಾರಾಯಣ
ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ,
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ,
ಮಾಧ್ಯಮ ಬಿಂಬ ಹಾಗೂ ಸ್ವಯಂ ಟೈಮ್ಸ್ ಚಾನಲ್‌ನ ವಸಂತ್
ಕುಮಾರ್, ನಿವೃತ್ತ ಪತ್ರಕರ್ತರಾದ ಪ್ರದೀಪ್ ನಾಯಕ್
ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ
ವಾಣಿಜ್ಯಶಾಸ್ತç ಉಪನ್ಯಾಸಕ ದೀಪಕ್ ಸ್ವಾಗತಿಸಿ ಕನ್ನಡ ಉಪನ್ಯಾಸಕ
ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಸಂಖ್ಯಾಶಾಸ್ತç
ಉಪನ್ಯಾಸಕಿ ಶ್ರೀಮತಿ ಮೇಘಶ್ರೀ ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page