
ಪೂರ್ವ ವಿದ್ಯಾರ್ಥಿ ಸಂಘ ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್, ಕಾರ್ಕಳ ಇದರ ವತಿಯಿಂದ ಸಂಸ್ಥೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನೆರವೇರಿತು. ಸಂಸ್ಥೆಯ ಪೂರ್ವ ವಿದ್ಯಾರ್ಥಿ ಹಾಗೂ ಸಾಗರ್ ಹಾಸ್ಪಿಟಲ್, ಬೆಂಗಳೂರು ಇಲ್ಲಿ ಪ್ಯಾಥಾಲಜಿಸ್ಟ್ ವೈದ್ಯರಾಗಿ ಕಾರ್ಯನಿವಹಿಸುತ್ತಿರುವ ಡಾ| ಇಶಾಂತ್ ಆನಂದ್ ಇವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಭವಿಷ್ಯದಲ್ಲಿ ವೈದ್ಯರಾಗಬೇಕಾದರೆ ಏನೆಲ್ಲಾ ಸಿದ್ಧತೆಗಳನ್ನು ನಡೆಸಬೇಕು, ಪೂರ್ವ ತಯಾರಿ ಹೇಗೆ ಇರಬೇಕು, ಯಾವ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಿದರು. ತಮ್ಮ ಶಾಲಾ ದಿನಗಳನ್ನು ಪ್ರೀತಿಪೂರ್ವಕವಾಗಿ ನೆನಪಿಸಿಕೊಂಡ ಅವರು, ಬೋರ್ಡ್ ಪರೀಕ್ಷೆಗೆ ತಯಾರಾಗಲು ವಿದ್ಯಾರ್ಥಿಗಳಿಗೆ ಕೆಲವು ಅಗತ್ಯ ಸಲಹೆಗಳನ್ನು ನೀಡಿದರು.

ಮಕ್ಕಳಿಗೆ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಎಂ ಕೆ ವಿಪುಲ್ ತೇಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಪ್ರಮೀಳಾ ಕೋಟ್ಯಾನ್ ಇವರು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪೂರ್ವ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು.






