
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲಿ ಕೆಲವು ರಿಪಬ್ಲಿಕನ್ ಶಾಸಕರೊಂದಿಗೆ ಭೋಜನಕೂಟದಲ್ಲಿ ಮಾತನಾಡಿದ್ದು ಈ ವೇಳೆ ವ್ಯಾಪಾರ ಬೆದರಿಕೆ ಹಾಕಿ ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದೆ ಎಂದು ಪುನರುಚ್ಚರಿಸಿದ್ದಾರೆ.
ಭಾರತವು ಪಹಲ್ಗಾಮ್ ದಾಳಿಯ ನಂತರ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ಪ್ರಾರಂಭಿಸಿದ್ದು ಮೇ ತಿಂಗಳಲ್ಲಿ ಭಾರತ-ಪಾಕಿಸ್ತಾನ ನಡುವಿನ ಯುದ್ಧದ ಸಮಯದಲ್ಲಿ ಸುಮಾರು 4-5 ಜೆಟ್‌ಗಳನ್ನು ಹೊಡೆದುರುಳಿಸಲಾಯಿತು. ಆದರೆ ಟ್ರಂಪ್, ಎರಡು ಪರಮಾಣು ಶಸ್ತ್ರಸಜ್ಜಿತ ದೇಶಗಳ ನಡುವಿನ ಕದನ ವಿರಾಮಕ್ಕೆ ವ್ಯಾಪಾರ ಬೋಗಿಯನ್ನು ಬಳಸಿಕೊಂಡು ಮಧ್ಯಸ್ಥಿಕೆ ವಹಿಸಿದ್ದೇನೆ ಎಂದು ಮತ್ತೊಮ್ಮೆ ಪುನರುಚ್ಚಾರಿಸಿದ್ದಾರೆ..



















































