29.7 C
Udupi
Sunday, December 28, 2025
spot_img
spot_img
HomeBlogಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದಿನಿಂದ ಶವಗಳನ್ನು ಹೊರತೆಗೆಯುವ ಕಾರ್ಯ ಶುರು : ಎಸ್ ಐ ಟಿ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದಿನಿಂದ ಶವಗಳನ್ನು ಹೊರತೆಗೆಯುವ ಕಾರ್ಯ ಶುರು : ಎಸ್ ಐ ಟಿ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ದೂರುದಾರ ಇದೀಗ 13 ಸ್ಥಳಗಳನ್ನ ಗುರುತಿಸಿದ್ದು ಇಂದಿನಿಂದ ಎಸ್ಐಟಿ ಯು ಶವಗಳನ್ನು ಹೊರತೆಯುವ ಕಾರ್ಯ ಶುರು ಮಾಡಿದೆ.

ಸೋಮವಾರ ಮೊದಲು ಗುರುತು ಮಾಡಿದ್ದ ಸ್ಥಳದಿಂದಲೇ ಸಮಾಧಿ ಅಗೆಯುವ ಕೆಲಸ ಆರಂಭವಾಗಿದ್ದು ಅದಕ್ಕಾಗಿ 12 ಕಾರ್ಮಿಕರನ್ನು ನಿಯೋಜನೆ ಮಾಡಿಕೊಂಡಿದೆ. ಅಲ್ಲದೇ ಧರ್ಮಸ್ಥಳ ಗ್ರಾಪಂ ನಿಂದ ಉತ್ಖನನಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದ್ದು ಸ್ಟೆಲ್ಲಾ ವರ್ಗೀಸ್, ಕಂದಾಯ ಇಲಾಖೆ ಇತರ ಸಿಬ್ಬಂದಿಗಳೂ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಅಲ್ಲದೇ ನಾಲ್ವರು ವೈದ್ಯರು, ಸಹಾಯಕ ಸಿಬ್ಬಂದಿ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ.

ಮಹಜರಿನ ಮೊದಲ ದಿನ 13 ಸ್ಥಳಗಳನ್ನು ಗುರುತಿಸಿದ ಸ್ಥಳಗಳ ದಾಖಲೀಕರಣ ಮಾಡಿದ ಎಸ್‌ಐಟಿ ಟೀಮ್ ಗುರುತಿಸಿದ ಎಲ್ಲಾ ಸ್ಥಳಗಳಲ್ಲಿ ಪ್ರತಿ ಸ್ಥಳಕ್ಕೂ ತಲಾ 2 ಮಂದಿ ಶಸ್ತ್ರಸಜ್ಜಿತ ಸಿಬ್ಬಂದಿಗಳನ್ನ ನೇಮಕ ಮಾಡಿ ದಟ್ಟ ಅರಣ್ಯದಲ್ಲಿ ರಾತ್ರಿ ಹಗಲು ಸರ್ಪಗಾವಲು ಹಾಕಿದೆ. ಗುರುತಿಸಿದ ಜಾಗಗಳಿಗೆ ಟೇಪ್ ಹಾಕಿ, ಎಲ್ಲದಕ್ಕೂ ನಂಬರ್ ನೀಡಲಾಗಿದೆ. ಇಂದು ಮತ್ತೆ ಉಳಿದಿರುವ ಜಾಗಗಳ ಗುರುತಿಸುವ ಕೆಲಸ ನಡೆಯಲಿದ್ದು, ಬಳಿಕ ಎಲ್ಲವನ್ನ ಅಗೆಯುವ ತೀರ್ಮಾನವನ್ನು ಎಸ್‌ಐಟಿ ಮಾಡಿದೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page