
ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಕಡಿತಗೊಳಿಸಿದೆ. 19 ಕೆಜಿ ಎಲ್ ಪಿ ಜಿ ವಾಣಿಜ್ಯ ಸಿಲಿಂಡರ್ ಗಳ ಬೆಲೆಯಲ್ಲಿ ಪ್ರತಿ ಸಿಲಿಂಡರ್ ಗೆ 33.50 ರೂ. ಗಳಷ್ಟು ಕಡಿಮೆ ಮಾಡಲಾಗಿದ್ದು ಕೊಲ್ಕತ್ತಾ ಮತ್ತು ಚೆನ್ನೈನಲ್ಲಿ ಅತಿ ಹೆಚ್ಚು ಕಡಿತ ಮಾಡಲಾಗಿದೆ.
ಬೆಂಗಳೂರಿನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,738 ರೂ. ಇದ್ದು ಚೆನ್ನೈನಲ್ಲಿ 19 ಕೆ.ಜಿ ಎಲ್ ಪಿ ಜಿ ಸಿಲಿಂಡರ್ ಬೆಲೆ 1,800 ಗಳಿಗಿಂತ ಕಡಿಮೆ ಇದ್ದರೆ ದೆಹಲಿಯಲ್ಲಿ ಇದರ ಬೆಲೆ ಪ್ರತಿ ಸಿಲಿಂಡರ್ ಗೆ 1650 ರೂ. ಗಳಿಗಿಂತ ಕಡಿಮೆ ಇದೆ. ಅಲ್ಲದೆ ಮುಂಬೈನಲ್ಲಿ ಪ್ರತಿ ಸಿಲಿಂಡರ್ ಗೆ 1,600 ರೂ. ಗಳಿಗಿಂತ ಕಡಿಮೆ ಬೆಲೆ ಇದೆ ಎಂದು ತಿಳಿದು ಬಂದಿದೆ.





