
ಹುಬ್ಬಳ್ಳಿ: ಎಪ್ರಿಲ್ 18,2024 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಭವಿಷ್ಯ ಇಂದು ನಿರ್ಧಾರವಾಗಲಿದ್ದು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಫಯಾಜ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಇಂದು ತೀರ್ಪು ನೀಡಲಿದೆ.
ನ್ಯಾಯಾಲಯದ ತೀರ್ಪಿಗೂ ಮುನ್ನವೇ ಕೆಲ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದು ಲವ್ ಜಿಹಾದ್ ಫಯಾಜ್‌ಗ ಜಾಮೀನು ಬೇಡ ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ನೇಹಾ ಕೊಲೆಯಾದ ಕಾಲೇಜಿನಿಂದ ನ್ಯಾಯಾಲಯದವರೆಗೆ ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ವಾಮ ಮಾರ್ಗದ ಮೂಲಕ ಜಾಮೀನಿಗಾಗಿ ಮನವಿ ಮಾಡಿದ್ದು ಆದರೆ ನ್ಯಾಯಾಲಯ ಮಗಳಿಗೆ ನ್ಯಾಯಕೊಡಿಸುವ ಭರವಸೆ ಇದೆ ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಹೇಳಿದ್ದಾರೆ.