
ಮಂಗಳೂರು: ಬಿ. ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಪೊಲೀಸರು ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದಿದ್ದು ಇದೀಗ ನನ್ನ ಜೀವಕ್ಕೆ ಹಾನಿಯಾದ್ರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ನಮ್ಮ ಉದ್ದೇಶ ಏನಿದ್ದರೂ ಸೌಜನ್ಯಗೆ ನ್ಯಾಯ ಸಿಗಬೇಕು. ಈ ಹೋರಾಟ ಮುಂದುವರಿದು ಅತ್ಯಾಚಾರಿಗಳ ಬಂಧನ ಆಗಬೇಕು. ಎಸ್‌ಐಟಿ ತನಿಖೆ ಮುಂದುವರಿಸಬೇಕು. ನಾನೀಗ ಪೊಲೀಸ್ ಠಾಣೆಗೆ ಹೋಗ್ತೀನಿ, ಪೊಲೀಸರಿಗೆ ಸರಿಯಾದ ಮಾಹಿತಿ ಕೊಡ್ತೀನಿ, ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರಲ್ಲದೇ ಬಿಜೆಪಿಯವರ ಪಾಪದ ಕೂಸು ಸರ್ವನಾಶ ಆಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



















