
ಬೆಂಗಳೂರು: ಶನಿವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ 75 ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅರಮನೆ ರಸ್ತೆಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ್ದ ‘ಅಮೃತ ಸಂಭ್ರಮ’ ಕಾರ್ಯಕ್ರಮದಲ್ಲಿ ಮಾತನಾಡಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಕರ್ತರಿಗೆ ಬಡ್ಡಿರಹಿತ ಸಾಲ, ಉತ್ತಮ ಆರೋಗ್ಯ ಸೇವೆ ದೊರೆಯುವಂತಾಗಬೇಕು. ಇದು ಎಲ್ಲ ನೈಜ ಪತ್ರಕರ್ತರಿಗೂ ಸಿಗುವಂತಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಪತ್ರಕರ್ತರ ಕಾರ್ಯ ಸವಾಲಿನಿಂದ ಕೂಡಿದ್ದು ಬಡ್ಡಿರಹಿತ ಸಾಲ ಕೊಡಲೇಬೇಕು. ಮಾನ್ಯತೆ ಪಡೆದ ಪರ್ತಕರ್ತರು ಮಾಧ್ಯಮ ಸಂಜೀವಿನಿ ಯೋಜನೆಯಡಿ 5 ಲಕ್ಷ ರು. ವರೆಗೆ ಉಚಿತ ಆರೋಗ್ಯ ಸೇವೆ ಪಡೆಯಬಹುದು. ಪತ್ರಕರ್ತರ ಸಹಕಾರ ಸಂಘ ಇನ್ನಷ್ಟು ಸದೃಢವಾಗಲಿ. ಸಂಘಕ್ಕೆ 10 ಕೋಟಿ ರು. ಬಡ್ಡಿರಹಿತ ಸಾಲ ನೀಡುವುದಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ತಕ್ಷಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಅಥವಾ ಬಜೆಟ್‌ನಲ್ಲಿ ಘೋಷಿಸಲಾಗುವುದು ಎಂದು ಹೇಳಿದರು.