27.2 C
Udupi
Saturday, August 30, 2025
spot_img
spot_img
HomeBlogವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ: ಐವರ ವಿರುದ್ಧ ಎಫ್ಐಆರ್...

ವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ: ಐವರ ವಿರುದ್ಧ ಎಫ್ಐಆರ್ ದಾಖಲು

ಯಾದಗಿರಿ: ಶಹಾಪುರ ನಗರದ ವಸತಿ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು ಈ ಕುರಿತು ಐವರ ವಿರುದ್ಧ FIR ದಾಖಲಾಗಿದೆ.

17 ವರ್ಷದ ವಿದ್ಯಾರ್ಥಿನಿ ಹೊಟ್ಟೆ ನೋವು ತಾಳಲಾರದೆ ಚೀರಾಡುತ್ತಿದ್ದಾಗ ಸಹಪಾಠಿಗಳು ಆಕೆಯನ್ನು ಶೌಚಾಲಯಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಯೇ ಆಕೆ ಮಗುವಿಗೆ ಜನ್ಮ ನೀಡಿದ್ದು ಬಳಿಕ ತಾಯಿ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಚಾರ ತಿಳಿದು ಆಘಾತಗೊಂಡ ವಿದ್ಯಾರ್ಥಿನಿಯ ತಾಯಿಯು ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಂಶುಪಾಲೆ ಬಸಮ್ಮ, ವಾರ್ಡನ್ ಗೀತಾ, ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ಟಾಫ್ ನರ್ಸ್ ಕಾವೇರಮ್ಮ ಹಾಗೂ ಕೇಸ್ ಮುಚ್ಚಿ ಹಾಕಲು ಪ್ರಯತ್ನಿಸಿದ ವಿದ್ಯಾರ್ಥಿನಿಯ ಸಹೋದರ ಶರಣಬಸಪ್ಪ ಸೇರಿ 5 ಮಂದಿ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಹಾಗೂ ಬಾಲ ನ್ಯಾಯ ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಶಾಲೆಯ ಪ್ರಾಂಶುಪಾಲೆ, ವಾರ್ಡನ್, ವಿಜ್ಞಾನ ಶಿಕ್ಷಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರನ್ನು ಅಮಾನತು ಮಾಡಲಾಗಿದ್ದು ಇದಲ್ಲದೆ ಸ್ಟಾಫ್ ನರ್ಸ್ ಹೊರಗುತ್ತಿಗೆ ಸಿಬ್ಬಂದಿಯಾಗಿದ್ದು ಅವರ ವಿರುದ್ಧವು ಕ್ರಮಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page