
ಯಾದಗಿರಿ: ಮಾಜಿ ಸಚಿವ ಹಾಗೂ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರು ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಪ್ರಧಾನಿಯಾಗುವ ಯೋಗ ಸಮೀಪಿಸುತ್ತಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಭಾಗದ ದೊಡ್ಡ ನೇತಾರ, ಪ್ರಧಾನಿಮಂತ್ರಿ ಸಮಾನ ಅನ್ನುವ ದೊಡ್ಡಮಟ್ಟದಲ್ಲಿ ಅವರು ಬೆಳೆದಿದ್ದಾರೆ, ಅವರು ಎಐಸಿಸಿ ಅಧ್ಯಕ್ಷರು ಇದ್ದಾರೆ. ಇವತ್ತು ಇಂದಿರಾಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕುಳಿತ ಸ್ಥಾನದಲ್ಲಿ ಖರ್ಗೆಯವರು ಕುಳಿತಿದ್ದಾರೆ ಎಂದು ಅಭಿಮಾನ ವ್ಯಕ್ತಪಡಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರ ಮುಖಾಂತರ ನಾನು ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸಬೇಕೆಂಬ ಪ್ರತಿಜ್ಞೆ ತೊಟ್ಟಿದ್ದೇನೆ. ಸೂರ್ಯ- ಚಂದ್ರ ಹುಟ್ಟೋದು ಎಷ್ಟು ಸತ್ಯವೋ, ಮಲ್ಲಿಕಾರ್ಜುನ ಖರ್ಗೆಯವರ ಮುಖಾಂತರ ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸುವುದು ಅಷ್ಟೇ ಸತ್ಯ ಎಂದು ಹೇಳಿದರು.