
2024 25 ನೇ ಸಾಲಿನಲ್ಲಿ 100% ಸಾಲ ವಸೂಲಾತಿ ಹಾಗೂ ರೂ. 1.10 ಕೋಟಿ ನಿವ್ವಳ ಲಾಭ ಗಳಿಕೆ ಸಾಧನೆಗಾಗಿ ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಬ್ಯಾಂಕಿನ “ಸಾಧನಾ ಪ್ರಶಸ್ತಿ” ದೊರಕಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ನವೀನ್ ಎಂ. ಸುವರ್ಣ ಇವರನ್ನು ಸಂಘದ ಪರವಾಗಿ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಡಾ |ಎಂ. ಎನ್. ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನಾಗೇಶ್ ಭಂಡಾರಿ, ನಿರ್ದೇಶಕರುಗಳಾದ ಶ್ರೀ ಅನಿಲ್ ಎಸ್. ಪೂಜಾರಿ, ಶ್ರೀ ಹೆಚ್. ವೆಂಕಟೇಶ್ ಗೋರೆ, ಶ್ರೀ ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು.



















