
ಕಾರ್ಕಳ: ಆಗಸ್ಟ್ 23 ರಂದು ತಾಲೂಕಿನ ಮುಂಡ್ಕೂರು ಎಂಬಲ್ಲಿ ತೋಟದ ಮನೆಯಲ್ಲಿ ಅಡಿಕೆ ಕಳ್ಳತನವಾಗಿದ್ದು ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಇದೀಗ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರು 12 ಮಂದಿ ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆ ವೇಳೆ ಬಟ್ಟೆ ಹಾಗೂ ಇನ್ನಿತರೆ ಮೋಜು ಮಸ್ತಿ ಮಾಡಲು ಈ ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳು ಅಪ್ರಾಪ್ತ ವಯಸ್ಕರಾಗಿದ್ದು ಬೇರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಪೊಲೀಸರು ಆರೋಪಿಗಳ ಸಹಿತ 5 ಲಕ್ಷ ರೂ. ಮೌಲ್ಯದ ರೂ.1,100 ಕೆಜಿ ಅಡಿಕೆ ವಶಪಡಿಸಿಕೊಂಡಿದ್ದು ಆರೋಪಿಗಳನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಮಾರ್ಗದರ್ಶನದಲ್ಲಿ, ನಿರೀಕ್ಷಕ ಮಂಜಪ್ಪ ಅವರ ನೇತೃತ್ವದಲ್ಲಿ ಕಾರ್ಕಳ ಗ್ರಾಮಂತರ ಠಾಣೆಯ ಪಿಎಸ್ಐ ಗಳಾದ ಪ್ರಸನ್ನ ಎಂ ಎಸ್, ಸುಂದರ, ಎಎಸ್ಐ ಗಳಾದ ಪ್ರಕಾಶ್, ಸುಂದರ ಗೌಡ, ಸಿಬ್ಬಂದಿ ರುದ್ರೇಶ್, ಚಂದ್ರಶೇಖರ, ಮಹಾಂತೇಶ್, ಜಿಲ್ಲಾ ಪೊಲೀಸ್ ಕಚೇರಿಯ ಸಿಡಿಆರ್ ಸಿಬ್ಬಂದಿ ದಿನೇಶ್, ನಿತಿನ್ ಅವರ ತಂಡವು ಈ ಕಾರ್ಯಾಚರಣೆ ನಡೆಸಿ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದಾರೆ.



















