
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಸ್ನೇಹಿತ ಚಾರ್ಲಿ ಕಿರ್ಕ್ ಚರ್ಚೆಯೊಂದರಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ, ಗುಂಡೇಟಿಗೆ ಬಲಿಯಾಗಿದ್ದಾರೆ.
31 ವರ್ಷದ ಚಾರ್ಲಿ “ಟರ್ನಿಂಗ್ ಪಾಯಿಂಟ್” ಹೆಸರಲ್ಲಿ ಸಂಘಟನೆ ಸ್ಥಾಪಿಸಿದ್ದು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ರಾಷ್ಟ್ರೀಯ ನೀತಿ ಮಂಡಳಿಯ ಸದಸ್ಯರಾಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು. ಕಳೆದ ಹತ್ತು ವರ್ಷಗಳಲ್ಲಿ ಎಷ್ಟು ಟ್ರಾನ್ಸ್ ಜೆಂಡರ್ ಅಮೆರಿಕನ್ನರು ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದಾರೆಂದು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಿರುವ ಸಂದರ್ಭ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.
ಆಪ್ತ ಸ್ನೇಹಿತನ ಹತ್ಯೆಯ ವಿಚಾರ ಪ್ರತಿಕ್ರಿಯಿಸಿದ ಟ್ರಂಪ್, ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಚಾರ್ಲಿಗಿಂತ ಉತ್ತಮವಾಗಿ ಯಾರು ಯುವಕರ ಹೃದಯವನ್ನು ಅರ್ಥ ಮಾಡಿ ಕೊಂಡಿರಲಿಲ್ಲ. ನಾನು ಅವರನ್ನು ವಿಶೇಷವಾಗಿ ಪ್ರೀತಿಸುತಿದ್ದೆ. ಅವರು ಈಗ ನಮ್ಮೊಂದಿಗೆ ಇಲ್ಲ. ಗುಂಡೇಟಿಗೆ ಬಲಿಯಾದ ಚಾರ್ಲಿಗಾಗಿ ನಾವೆಲ್ಲರೂ ಪ್ರಾರ್ಥಿಸಬೇಕು ಎಂದು ಪೋಸ್ಟ್ ಮಾಡಿದ್ದಾರೆ.



















