ಯುವತಿ ಸಾವು, ಪಾಗಲ್ ಪ್ರೇಮಿ ಬಾವಿಗೆ ಹಾರಿ ಆತ್ಮಹತ್ಯೆ

ಉಡುಪಿ: ಬ್ರಹ್ಮಾವರದ ಕೊಕ್ಕರ್ಣೆ ಬಳಿ ಪಾಗಲ್ ಪ್ರೇಮಿಯೊಬ್ಬ ಮದುವೆ ನಿರಾಕರಿಸಿದ ಕಾರಣ, ಯುವತಿಗೆ ಚಾಕು ಇರಿದ ಘಟನೆ ವರದಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಪಾಗಲ್ ಪ್ರೇಮಿ ರಕ್ಷಿತ್ ಪೂಜಾರಿ (24) ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.
ಮದುವೆ ವಿಚಾರವಾಗಿ ಯುವತಿಯ ಕುಟುಂಬದವರು ಆಕ್ಷೇಪ ವ್ಯಕ್ತಪಡಿಸಿದ್ದು ಇದೇ ಕಾರಣಕ್ಕಾಗಿ ಯುವತಿ ರಕ್ಷಿತ್ ನಂಬರನ್ನು ಬ್ಲಾಕ್ ಮಾಡಿದ್ದಳು. ಇದರಿಂದ ಕೋಪಗೊಂಡ ಯುವಕ ಆಕೆ ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವ ಸಂದರ್ಭ ಹಿಂಬಾಲಿಸಿ ಕತ್ತು ಮತ್ತು ಎದೆಯ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ, ಯುವತಿಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.













