
ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ 8ನೇ ತರಗತಿ ವಿದ್ಯಾರ್ಥಿ ಮಾಸ್ಟರ್ ಅಶ್ವಿನ್ ಎ. ಶೆಟ್ಟಿ ಇವರು ಜೆಷ್ಮಾ ಬ್ಯಾಡ್ಮಿಂಟನ್ ಅಕಾಡೆಮಿ ಉದ್ಯಾವರ ಇಲ್ಲಿ ನಡೆದ ಮಾನ್ಸೂನ್ ಕಪ್ 2025 ಬ್ಯಾಡ್ಮಿಂಟನ್ ಟೂರ್ನಮೆಂಟ್ ನಲ್ಲಿ ಭಾಗವಹಿಸಿ 17 ವರುಷದ ಒಳಗಿನ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಹಾಗೂ 15 ವರುಷದ ಒಳಗಿನ ಬಾಲಕರ ವಿಭಾಗದಲ್ಲಿ ದ್ವಿತೀಯ ಪಡೆದಿರುತ್ತಾರೆ.
ಇವರನ್ನು ಶಾಲಾ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭ ಹಾರೈಸಿರುತ್ತಾರೆ.













