
ದಾವಣಗೆರೆ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೆ. 13ರಂದು ನಗರದ ಬಿಇಐಟಿ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ಎರಡನೇ ರಾಜ್ಯ ಮಟ್ಟದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ್ದು ಈ ವೇಳೆ ಒಂದೇ ಮಗು ಇದ್ದರೂ ಕೂಡ ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚದೆ ಇರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದ್ದಾರೆ.
ರಾಜ್ಯದ 13,000 ಶಾಲೆಗಳಲ್ಲಿ ಮಕ್ಕಳ ಹಾಜರಾತಿ 25 ಕ್ಕಿಂತಲೂ ಕಡಿಮೆಯಿದ್ದು ಆದರೂ ಯಾವುದೇ ಶಾಲೆಯನ್ನು ಮುಚ್ಚದೆ ಇರಲು ತೀರ್ಮಾನಿಸಲಾಗಿದೆ. ಈಗ 800 ಕೆಪಿಎಸ್ ಶಾಲೆಗಳನ್ನು ಪ್ರಾರಂಭ ಮಾಡಲು 3500 ಕೋಟಿ ಅನುದಾನವನ್ನು ಇಡಲಾಗಿದ್ದು ಅಷ್ಟೇ ಅಲ್ಲದೆ ಹೊಸ ಪಿಯು ಕಾಲೇಜುಗಳನ್ನು ಆರಂಭಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.













