
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಪೂರ್ಣಪ್ರಜ್ಞಾ ಪ.ಪೂ ಕಾಲೇಜು ಅದಮಾರು, ಕಾಪು ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಎಸ್.ಎನ್.ವಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಎಸ್.ಎನ್.ವಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ತಂಡ ಪ್ರತಿನಿಧಿಸಿದ್ದ ಪ್ರಥಮ ಪಿಯುಸಿ ಧನುಷ್ ಹಾಗೂ ದ್ವಿತೀಯ ಪಿಯುಸಿ ಶ್ರೀಶಾಂತ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಉಪನ್ಯಾಸಕ ವರ್ಗದವರು, ತರಬೇತುದಾರರು, ಕಾಲೇಜಿನ ಹಳೆ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಕೋರಿರುತ್ತಾರೆ.








