
ಹಾಳೆಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯು ದಿನಾಂಕ: 21-09-2025ರಂದು ಶ್ರೀ ಕೆ. ಸಂಜೀವ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘದ ಕಾರ್ಯದರ್ಶಿ ವಾರ್ಷಿಕ ವರದಿಯನ್ನು ವಾಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಒಕ್ಕೂಟದ ವಿಸ್ತರಣಾಧಿಕಾರಿ ಅಬ್ದುಲ್ ಶಮೀರ್ರವರು ಪರಿಶೋದಿತ ಲೆಕ್ಕಪತ್ರವನ್ನು ಸಭೆಯ ಮುಂದೆ ಮಂಡಿಸಿ ಸಂಘವು ಪ್ರಸ್ತುತ ವರ್ಷದಲ್ಲಿ 5,10,914.41 ರೂ. ಲಾಭ ಗಳಿಸಿರುವುದನ್ನು ಘೋಷಿಸಿದರು. ಲಾಭಾಂಶದಲ್ಲಿ ಸದಸ್ಯರಿಗೆ 25% ಹಾಲು ಮುನಾಫೆಯನ್ನು ಘೋಷಿಸಲಾಯಿತು. ಅಲ್ಲದೆ ಹಾಲು ಉತ್ಪಾದಕರಿಗೆ 65% ರಷ್ಟು ಬೋನಸ್ ನೀಡಲು ನಿರ್ಧರಿಸಲಾಯಿತು. ಈ ಸಂದರ್ಭದಲ್ಲಿ ಸಂಘಕ್ಕೆ ಅತೀ ಹೆಚ್ಚು ಹಾಲು ಪೂರೈಸಿದ ಹದಿನೈದು ಸದಸ್ಯರಿಗೆ ಬಹುಮಾನಗಳನ್ನು ನೀಡಲಾಯಿತು.ಸಂಘದ ಸದಸ್ಯರ ಮಕ್ಕಳಿಗೆ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ವಿಸ್ತರಣಾಧಿಕಾರಿಯವರು ಒಕ್ಕೂಟದಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಹಾಗೂ ಸದಸ್ಯರು ಇದರ ಗರಿಷ್ಠ ಪ್ರಯೋಜನವನ್ನು ಪಡೆಯುವಂತೆ ವಿನಂತಿಸಿದರು. ಈ ಸಂದರ್ಭದಲ್ಲಿ ಹನ್ನೊಂದು ವರ್ಷಗಳಿಂದ ನಿರಂತರವಾಗಿ ವಿವಿಧ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿರುವ ಹಾಳೆಕಟ್ಟೆ ಹಾಲು ಉತ್ಪಾದಕರ ಸಂಘವು ದ್ವಿತೀಯ ಬಾರಿಗೆ ಹಾಲು ಉತ್ಪಾದಕರ ಒಕ್ಕೂಟದಿಂದ ಉಭಯ ಜಿಲ್ಲೆಗಳಲ್ಲಿ ಅತ್ಯುತ್ತಮ ಸಂಘ ಪ್ರಶಸ್ತಿಯನ್ನು ಪಡೆದಿರುತ್ತದೆ. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಉಡುಪಿ ಹಾಗೂ ದ.ಕ. ಜಿಲ್ಲೆಗಳಲ್ಲಿ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರ ಸಂಘ ಪ್ರಶಸ್ತಿಯನ್ನು ಪಡೆದುಕೊಂಡಿರುವ ಬಗ್ಗೆ ಉಲ್ಲೇಖಿಸಿ ಆಡಳಿತ ಮಂಡಳಿ ಮತ್ತು ದಕ್ಷ ಕಾರ್ಯನಿರ್ವಾಹಕರ ಕಾರ್ಯಕ್ಷಮತೆಯಿಂದ ಇದು ಸಾಧ್ಯವಾಗಿದೆ ಎಂದು ಶ್ಲಾಘಿಸಿ ಉತ್ತಮ ಹಾಲು ಪೂರೈಸಿದ ಸದಸ್ಯರನ್ನು ಹಾಗೂ ಕಾರ್ಯಕ್ರಮ ನಿರೂಪಿಸಿದ ಶ್ರೀ ವಸಂತ ಬೋಂಟ್ರ ಇವರು ಅಭಿನಂದಿಸಿದರು.

ಪ್ರಾಸ್ತಾವಿಕ ಮಾತುಗಳೊಂದಿಗೆ ವಸಂತರವರು ಸ್ವಾಗಸಿದರು, ಕಾರ್ಯದರ್ಶಿ ಸುಜಾತರವರು ವಾರ್ಷಿಕ ವರದಿ, ಲಾಭಾಂಶ ವಿಂಗಡಣೆಯ ಪಟ್ಟಿ ಹಾಗೂ ಬಹುಮಾನಿತರ ಪಟ್ಟಿಯನ್ನು ವಾಚಿಸಿ ಧನ್ಯವಾದ ಗೈದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶಶಿಧರ ಕರ್ಕೇರ ಹಾಗೂ ಸಂಘದ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.










