
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಗೃಹ ಕಚೇರಿ ಕೃಷ್ಣಾ ದಲ್ಲಿ ಸಭೆ ನಡೆಸಿದ್ದು ಈ ವೇಳೆ ಒಂದು ತಿಂಗಳಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚದಿದ್ದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಚೀಫ್ ಇಂಜಿನಿಯರ್ ಗಳನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಜಿಬಿಎ ಅಧಿಕಾರಿಗಳ ಸಭೆಯಲ್ಲಿ ಇಂಜಿನಿಯರ್ ಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸಿಎಂ ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಟ? ನಿಮಗೆ ನಾಚಿಕೆ ಆಗಲ್ವಾ? ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿ.ದೆ ಮುಚ್ಚಿರುವ ಗುಂಡಿಗಳು ನೆಟ್ಟಗಿಲ್ಲ. ಜನರ ಕಷ್ಟ ಗೊತ್ತಾಗಲ್ವಾ? ನಿಮ್ಮನ್ನು ಸಸ್ಪೆಂಡ್ ಮಾಡಿ ಮನೆಗೆ ಕಳಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.









