31.9 C
Udupi
Thursday, April 2, 2026
spot_img
spot_img
HomeBlogಕಾಂತಾರ ಚಾಪ್ಟರ್‌-1 ಟ್ರೈಲರ್ ನೋಡಿ ಫ್ಯಾನ್ಸ್ ಫಿದಾ : ಕನ್ನಡ, ಹಿಂದಿ, ತಮಿಳು, ಮಲಯಾಳಂ ಹಾಗೂ...

ಕಾಂತಾರ ಚಾಪ್ಟರ್‌-1 ಟ್ರೈಲರ್ ನೋಡಿ ಫ್ಯಾನ್ಸ್ ಫಿದಾ : ಕನ್ನಡ, ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯ ಟ್ರೇಲರ್ ಬಿಡುಗಡೆ

spot_imgspot_img

ಇಂದು ಮಧ್ಯಾಹ್ನ 12.45 ಕ್ಕೆ ಕಾಂತಾರ ಚಾಪ್ಟರ್‌-1 ಚಿತ್ರದ ಟ್ರೇಲರ್ ಕನ್ನಡ, ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಿದ್ದು ಇದನ್ನು ವೀಕ್ಷಿಸಿದ ಅಭಿಮಾನಿಗಳು ಮನಸೋತಿದ್ದಾರೆ. ಪ್ರಮುಖವಾಗಿ ರಾಜ ಮತ್ತು ಕಾಡಿನ ಜನರ ನಡುವಿನ ಕಥೆ ಹಾಗೂ ಕಾಂತಾರ ನೆಲದ ಮಣ್ಣಿನ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದೆ.

ವಿಶ್ವವೇ ಎದುರು ನೋಡುತ್ತಿರುವ ಬಹು ನಿರೀಕ್ಷಿತ ʻಕಾಂತಾರ ಚಾಪ್ಟರ್ – 1ʼ ಚಿತ್ರವು ಸಪ್ತ ಭಾಷೆಗಳಲ್ಲಿ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದ್ದು, ಇಂದು ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಟ್ರೇಲರನ್ನು ಆಯಾ ಭಾಷೆಗಳ ಸ್ಟಾರ್ ನಟರುಗಳು ಬಿಡುಗಡೆ ಮಾಡಿದರು. ಹಿಂದಿ ಟ್ರೇಲರ್‌ನ್ನು ಹೃತಿಕ್ ರೋಷನ್, ತಮಿಳಿನ ಟ್ರೇಲರ್‌ನ್ನು ಶಿವಕಾರ್ತಿಕೇಯನ್, ಮಲಯಾಳಂ ಟ್ರೇಲರ್‌ನ್ನು ಪೃಥ್ವಿರಾಜ್ ಸುಕುಮಾರನ್ ಹಾಗೂ ತೆಲುಗು ಭಾಷೆಯ ಟ್ರೇಲರ್‌ನ್ನು ಪ್ರಭಾಸ್ ಅವರು ಅನಾವರಣ ಮಾಡಿದರು.

ಬಿ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ, ಅರವಿಂದ್ ಎಸ್.ಕಶ್ಯಪ್ ಅವರ ಛಾಯಾಗ್ರಹಣ ಹಾಗೂ ಪ್ರಗತಿ ಶೆಟ್ಟಿ ಅವರ ವಸ್ತ್ರ ವಿನ್ಯಾಸ ʻಕಾಂತಾರ-1ʼ ಚಿತ್ರಕ್ಕಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಅವರುಗಳು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ‘ಕಾಂತಾರ -1′ ಕಲೆ, ಭಕ್ತಿ ಮತ್ತು ಶಕ್ತಿಯ ಮಹತ್ವವನ್ನು ಒಳಗೊಂಡ ಚಿತ್ರವಾಗಿದ್ದು, ಸದಭಿರುಚಿಯ ಚಿತ್ರಗಳನ್ನೇ ನಿರ್ಮಾಣ ಮಾಡುತ್ತಾ ಬಂದಿರುವ ಹೊಂಬಾಳೆ ಫಿಲಂಸ್ ನಿಂದ ಮತ್ತೊಂದು ಅದ್ಭುತ ಚಿತ್ರ ಬರಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page