25.6 C
Udupi
Sunday, March 29, 2026
spot_img
spot_img
HomeBlogಕೇಂದ್ರ ಲೋಕಸೇವಾ ಆಯೋಗ 213 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗ 213 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕಸೇವಾ ಆಯೋಗ 213 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು ಈ ಮೂಲಕ UPSC ಮೂಲಕ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವವರಿಗೆ ಖುಷಿ ಸುದ್ದಿ ನೀಡಿದೆ.

ಇದಲ್ಲದೆ ವೈದ್ಯಕೀಯ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದ್ದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಅಕ್ಟೋಬರ್ 2 ರವರೆಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶವಿದ್ದು ಆಸಕ್ತ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್‌ಸೈಟ್ upsc.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಯುಪಿಎಸ್‌ಸಿ ಉಪನ್ಯಾಸಕ (ಉರ್ದು), ವೈದ್ಯಕೀಯ ಅಧಿಕಾರಿ, ಹೆಚ್ಚುವರಿ ಸರ್ಕಾರಿ ವಕೀಲ, ಸಹಾಯಕ ಕಾನೂನು ಸಲಹೆಗಾರ, ಲೆಕ್ಕಪತ್ರ ಅಧಿಕಾರಿ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳಿಗೆ ನೇಮಕಾತಿಗಾಗಿ ಒಟ್ಟು 213 ಅರ್ಜಿಗಳನ್ನು ಆಹ್ವಾನಿಸಿದೆ. ಇವುಗಳಲ್ಲಿ 125 ವೈದ್ಯಕೀಯ ಅಧಿಕಾರಿ ಹುದ್ದೆಗಳಾಗಿದ್ದು, ಹೆಚ್ಚುವರಿಯಾಗಿ, 15 ಉಪನ್ಯಾಸಕ (ಉರ್ದು), 5 ಹೆಚ್ಚುವರಿ ಸರ್ಕಾರಿ ವಕೀಲ, 16 ಸಹಾಯಕ ಕಾನೂನು ಸಲಹೆಗಾರ ಮತ್ತು 32 ಲೆಕ್ಕಪತ್ರ ಅಧಿಕಾರಿ ಹುದ್ದೆಗಳಿವೆ.

ವೈದ್ಯಕೀಯ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಎಂಬಿಬಿಎಸ್ ಪದವಿ, ಉಪನ್ಯಾಸಕ (ಉರ್ದು) ಹುದ್ದೆಗೆ ಸ್ನಾತಕೋತ್ತರ ಪದವಿ ಮತ್ತು ಬಿ.ಎಡ್. ಪದವಿ ಕಡ್ಡಾಯ. ಹೆಚ್ಚುವರಿ ಸರ್ಕಾರಿ ವಕೀಲ ಮತ್ತು ಸಹಾಯಕ ಕಾನೂನು ಸಲಹೆಗಾರರಂತಹ ಕಾನೂನು ಹುದ್ದೆಗಳಿಗೆ ಎಲ್‌ಎಲ್‌ಬಿ ಪದವಿ ಹಾಗೂ ಇತರ ಹುದ್ದೆಗಳಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ ಕಡ್ಡಾಯವಾಗಿದೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳು 25 ರೂಪಾಯಿ ಅರ್ಜಿ ಶುಲ್ಕ ಇದ್ದು ಮಹಿಳೆಯರು, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಂದ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page