
ವಿಟ್ಲ: ವಿಟ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಅಪ್ರಾಪ್ತ ಬಾಲಕಿ ಮನೆಗೆ ಬಂದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಯು ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಿದ್ದು ಈ ವೇಳೆ ಸ್ಥಳೀಯ ನಿವಾಸಿ ನಾರಾಯಣ(42) ಎಂಬಾತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಹೀಗಾಗಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.






















































