
ಕಾರ್ಕಳ : ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಶಾರದಾ ಪೂಜೆಯನ್ನು ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟಿನ ಟ್ರಸ್ಟಿಯಾಗಿರುವ ಶ್ರೀಮತಿ ವಿದ್ಯಾವತಿ ಎಸ್. ಶೆಟ್ಟಿಯವರು ದೀಪ ಬೆಳಗುವುದರ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.
ವಿದ್ಯಾರ್ಥಿಗಳು ಭಜನೆ ಮತ್ತು ಕುಣಿತ ಭಜನಾ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
ಕಾರ್ಯಕ್ರಮದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರಾದ ದಿನೇಶ್ ಕೊಡವೂರು , ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ವಾಣಿ. ಕೆ, ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಉಷಾ ರಾವ್. ಯು, ಸಾಹಿತ್ಯ ಉಪಸ್ಥಿತರಿದ್ದರು.






















































