
ಚೆನ್ನೈ: ಶನಿವಾರ ಕರೂರಿನ ರ‍್ಯಾಲಿ ವೇಳೆ ರಾತ್ರಿ 7:15 ಸುಮಾರಿಗೆ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.
ಕಾಲ್ತುಳಿತದಲ್ಲಿ ಸಾವು ನೋವು ಸಂಭವಿಸಿದ ಹಿನ್ನೆಲೆ ಶನಿವಾರ ಮಧ್ಯರಾತ್ರಿಯಿಂದಲೇ ವಿಜಯ್ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದ್ದು ಬೆದರಿಕೆ ಬಂದ ಹಿನ್ನೆಲೆ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳಗಳಿಂದ ಮನೆಯ ಸುತ್ತಲೂ ಹಾಗೂ ಮನೆಯ ಒಳಾಂಗಣವನ್ನ ಪರಿಶೀಲನೆ ಮಾಡಲಾಗಿದೆ.
ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು ಮೃತರಿಗೆ ವಿಜಯ್ 20 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದರೆ, ಸಿಎಂ ಸ್ಟಾಲಿನ್ ಅವರು ಮೃತರಿಗೆ 10 ಲಕ್ಷ ಹಾಗೂ ಗಾಯಾಳುಗಳಿಗೆ 1 ಲಕ್ಷ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಮೃತರಿಗೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಪ್ರಕಟಿಸಿದ್ದು ತಮಿಳುನಾಡು ಬಿಜೆಪಿ ಕೂಡ 1 ಲಕ್ಷ ಪರಿಹಾರ ಘೋಷಿಸಿದೆ.






















































