ಪ್ರೇಕ್ಷಕರ ಉತ್ತಮ ಸ್ಪಂದನೆ, ರಿಷಬ್ ಶೆಟ್ಟಿ ಕೃತಜ್ಞತೆ ಸಲ್ಲಿಸಿ ಭಾವುಕ…

ಕರ್ನಾಟಕ, ದೇಶ-ವಿದೇಶದಾದ್ಯಂತ ಹೌಸ್‌ಫುಲ್ ಪ್ರದರ್ಶನ ಕಂಡ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಕಾಂತಾರ ಚಾಪ್ಟರ್ 1 ಸಿನಿಮಾ ಹವಾ ಸೃಷ್ಟಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆಯುತ್ತಿದ್ದು ಪ್ರೇಕ್ಷಕರ ಉತ್ತಮ ಸ್ಪಂದನೆಗೆ ಕೃತಜ್ಞತೆ ಸಲ್ಲಿಸಿರುವ ರಿಷಬ್ ಶೆಟ್ಟಿ ಸಿನಿ ಪಯಣ ನೆನೆಪಿಸಿಕೊಂಡು ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.
‘2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, 5000ಕ್ಕೂ ಹೆಚ್ಚು housefull ಶೋಗಳ ಈ ಅದ್ಭುತ ಪಯಣ. ಇದು ಸಾಧ್ಯವಾಗಿದ್ದು ನಿಮ್ಮ ಪ್ರೀತಿ ಮತ್ತು ಬೆಂಬಲದಿಂದ ಮಾತ್ರ. ಇದಕ್ಕಾಗಿ ನಾನು ನಿಮಗೆ ಸದಾ ಋಣಿ. ಇದನ್ನು ಸಾಧ್ಯವಾಗಿಸಿದ ಪ್ರತಿಯೊಬ್ಬ ವ್ಯಕ್ತಿಗೂ ಸದಾ ಕೃತಜ್ಞರಾಗಿರುತ್ತೇನೆ’ ಎಂದು ರಿಷಬ್ ಪೋಸ್ಟ್ ಹಂಚಿಕೊಂಡಿದ್ದಾರೆ.



















