31.6 C
Udupi
Tuesday, March 24, 2026
spot_img
spot_img
HomeBlogಮೈಸೂರು ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ ಶವ ಪತ್ತೆ : ಅತ್ಯಾಚಾರ...

ಮೈಸೂರು ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ ಶವ ಪತ್ತೆ : ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ

ಮೈಸೂರು: ದಸರಾ ಪ್ರಯುಕ್ತ ಕಲಬುರಗಿಯಿಂದ ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ.

ಬಾಲಕಿಯ ದೇಹದ ಮೇಲೆ ಬಟ್ಟೆ ಇಲ್ಲದೆ ಮೃತದೇಹ ಪತ್ತೆಯಾದ ಕಾರಣ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಕಲುಬುರಗಿಯಿಂದ ಹಕ್ಕಿಪಿಕ್ಕಿ ಜನಾಂಗದ 50 ಕ್ಕೂ ಹೆಚ್ಚು ಕುಟುಂಬ ಬಂದಿದ್ದು ಇವರು ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆ ಕಡೆ ತೆರಳಲು ಸಿದ್ಧತೆ ನಡೆಸಿದ್ದು ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಮುಂಜಾನೆ ಮಳೆ ಬಂದು ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂದ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ವ್ಯಾಪಾರಕ್ಕೆ ಆಗಮಿಸಿದ್ದ 50 ಹಕ್ಕಿಪಿಕ್ಕಿ ಕುಟುಂಬಸ್ಥರನ್ನು ಪೊಲೀಸರು ಈಗ ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಶ್ವಾನ ದಳ ಆಗಮಿಸಿದ್ದು, ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page