ಚಟುವಟಿಕೆಗೆ ಪೂರ್ವಾನುಮತಿ ಕಡ್ಡಾಯ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರವು ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆ ನಿಷೇಧಿಸಲು ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು ಈ ನಿಯಮ ಜಾರಿಯಾದರೆ ಆರ್‌ಎಸ್‌ಎಸ್ ಮಾತ್ರವಲ್ಲ ಖಾಸಗಿ ಸಂಘ ಸಂಸ್ಥೆಗಳು / ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ.
2013 ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸರ್ಕಾರ ತಮಿಳುನಾಡು ಸರ್ಕಾರ ಕೈಗೊಂಡಿರುವ ನಿರ್ಧಾರದಂತೆ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾನುಮತಿ ಕಡ್ಡಾಯ ಮಾಡಿ ಹೊಸ ನಿಯಮ ತರಲು ಮುಂದಾಗಿದೆ. ಆದರೆ ತನ್ನ ತೀರ್ಮಾನದಲ್ಲಿ ಎಲ್ಲಿಯೂ ಆರ್‌ಎಸ್‌ಎಸ್ ಪದ ಬಳಕೆ ಮಾಡದ ಸರ್ಕಾರ ಖಾಸಗಿ ಸಂಸ್ಥೆಗಳು ಎಂದು ಉಲ್ಲೇಖಿಸಿ ಜಾಣತನದಿಂದ ಈ ನಿರ್ಧಾರ ಕೈಗೊಂಡಿದೆ.
ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗೆ ನಿಯಂತ್ರಣ ಮಾಡುವಂತೆ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಬೆನ್ನಲ್ಲೇ ಈ ನಿಯಮ ತಂದಿರುವುದು ಗಮನಾರ್ಹವಾಗಿದೆ.











