
ಬೆಂಗಳೂರು: ಅ.16 ರಂದು ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರವು ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.
ಸಾರ್ವಜನಿಕ ಆಸ್ತಿ, ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ.
- ಸಾರ್ವಜನಿಕ ರಸ್ತೆಗಳು, ಸರ್ಕಾರದ ಇತರೆ ಆಸ್ತಿ/ಸ್ಥಳಗಳು – ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು/ಪೊಲೀಸ್ ಅಧೀಕ್ಷಕರಿಂದ ಅನುಮತಿ ಪಡೆಬೇಕು.
- ಸರ್ಕಾರದ/ಸರ್ಕಾರಿ ಸಾಮ್ಯದ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣ – ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯಬೇಕು.
- ಉದ್ಯಾನಗಳು, ಆಟದ ಮೈದಾನಗಳು, ಇತರೆ ತೆರೆದ ಸ್ಥಳಗಳು – ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್.











