
ಬೆಂಗಳೂರು: ಸರ್ಕಾರವು ದೀಪಾವಳಿ ಸಂದರ್ಭದಲ್ಲಿ ಶಿಕ್ಷಕರಾಗುವ ಕನಸು ಕಂಡಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು ಅದೇನೆಂದರೆ ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ (TET)ಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಇದೇ ಅಕ್ಟೋಬರ್ 23ರಿಂದ ನವೆಂಬರ್ 9ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಡಿಸೆಂಬರ್ 7ರಂದು ನಡೆಸಲಾಗುವುದು, ಜೊತೆಗೆ ಫಲಿತಾಂಶವನ್ನು ಡಿಸೆಂಬರ್ 31ರಂದು ಪ್ರಕಟಿಸಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶ ಸೇರಿದಂತೆ ರಾಜ್ಯದ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಿಇಟಿ ಪರೀಕ್ಷೆಯ ಮೂಲಕ ನೇಮಕಾತಿ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.











