28.5 C
Udupi
Monday, April 13, 2026
spot_img
spot_img
HomeBlogಹೆಲ್ಮೆಟ್‌ ಧರಿಸದ್ದಕ್ಕೆ ಅಪಘಾತ ಪರಿಹಾರ ಮೊತ್ತದಲ್ಲಿ ಏಳೂವರೆ ಲಕ್ಷ ರು. ಕಡಿತಗೊಳಿಸಿ ಆದೇಶ ಹೊರಡಿಸಿದ ಹೈಕೋರ್ಟ್‌

ಹೆಲ್ಮೆಟ್‌ ಧರಿಸದ್ದಕ್ಕೆ ಅಪಘಾತ ಪರಿಹಾರ ಮೊತ್ತದಲ್ಲಿ ಏಳೂವರೆ ಲಕ್ಷ ರು. ಕಡಿತಗೊಳಿಸಿ ಆದೇಶ ಹೊರಡಿಸಿದ ಹೈಕೋರ್ಟ್‌

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಬೈಕ್‌ ಸವಾರನೋರ್ವ ಹೆಲ್ಮೆಟ್‌ ಧರಿಸದ ಕಾರಣ ಪರಿಗಣಿಸಿ ಪರಿಹಾರ ಮೊತ್ತದಲ್ಲಿ ಏಳೂವರೆ ಲಕ್ಷ ರು. ಕಡಿತಗೊಳಿಸಿ ಆದೇಶ ಹೊರಡಿಸಿದೆ.

ಅಪಘಾತದಿಂದಾಗಿ 2019ರಲ್ಲಿ ಮೃತಪಟ್ಟ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದ ನಿವಾಸಿ ಅವಿನಾಶ್‌ನ (23) ಕುಟುಂಬದವರಿಗೆ ಒಟ್ಟು 18,03,000 ರು. ಪರಿಹಾರ ನಿಗದಿಪಡಿಸಿ ಮೋಟಾರು ವಾಹನ ಅಪಘಾತ ಪರಿಹಾರ ಕ್ಲೇಮು ನ್ಯಾಯಾಧಿಕರಣ (ಎಂಎಟಿಸಿ) ಆದೇಶಿಸಿತ್ತು. ಈ ಪರಿಹಾರ ಪ್ರಮಾಣ ಹೆಚ್ಚಿದೆ ಎಂದು ಆಕ್ಷೇಪಿಸಿ ಅಘಾತಕ್ಕೆ ಕಾರಣವಾಗಿದ್ದ ಟ್ರ್ಯಾಕ್ಟರ್‌ವೊಂದಕ್ಕೆ ವಿಮಾ ಪಾಲಿಸಿ ನೀಡಿದ್ದ ವಿಮಾ ಕಂಪನಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ನಿಗದಿಪಡಿಸಿದ ಒಟ್ಟು 19,64,400 ರು. ಪರಿಹಾರದಲ್ಲಿ ಹೆಲ್ಮೆಟ್‌ ಧರಿಸದೆ ಇರುವುದು ಬೈಕ್‌ ಸವಾರನ ನಿರ್ಲಕ್ಷ್ಯವಾಗಿದೆ ಎಂದು ತೀರ್ಮಾನಿಸಿದ ಹೈಕೋರ್ಟ್‌, ನಿರ್ಲಕ್ಷ್ಯದ ಭಾಗವಾಗಿ ಶೇ.40ರಷ್ಟು ಹಣ ಅಂದರೆ 7,85,760 ರು. ಕಡಿತಗೊಳಿಸಿದೆ.

ಈ ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್‌ ಅವರ ನೇತೃತ್ವದ ವಿಭಾಗೀಯ ಪೀಠ, ಪರಿಹಾರ ಮೊತ್ತ ಕಡಿತಗೊಳಿಸಿ ಆದೇಶಿಸಿದೆ. ಅಲ್ಲದೆ, ಮೃತಪಟ್ಟಾಗ ಅವಿನಾಶ್‌ ವಯಸ್ಸು, ಪಡೆಯುತ್ತಿದ್ದ ಸಂಬಳ, ಅವರ ಕುಟುಂಬದವರು ಅನುಭವಿಸಿದ ಅವಲಂಬನೆ ನಷ್ಟ/ನೋವು, ಅಂತ್ಯಕ್ರಿಯೆ ಖರ್ಚು ಮತ್ತು ಆತ ಭವಿಷ್ಯದಲ್ಲಿ ಗಳಿಸಬಹುದಾಗಿದ್ದ ಸಂಭಾವ್ಯ ಆದಾಯವನ್ನು ಲೆಕ್ಕಹಾಕಿದ ಪೀಠವು ಒಟ್ಟು 19,64,400 ರು. ಪರಿಹಾರ ಪಡೆಯಲು ಅನಿನಾಶ್ ಕುಟುಂಬದವರು ಅರ್ಹರಾಗಿದ್ದಾರೆ. ಆದರೆ, ಅಪಘಾತ ನಡೆದಾಗ ಮೃತ ಹೆಲ್ಮೆಟ್‌ ಧರಿಸದ್ದಕ್ಕೆ ಶೇ.40ರಷ್ಟು ಅಂದರೆ ಒಟ್ಟು 7,85,760 ರು. ಅನ್ನು ನಿರ್ಲಕ್ಷ್ಯದ ಭಾಗವಾಗಿ ನಿಗದಿಯಾದ ಪರಿಹಾರ ಮೊತ್ತದಲ್ಲಿ ಕಡಿತಗೊಳಿಸಲಾಗುತ್ತಿದೆ ಎಂದು ತಿಳಿಸಿತು. ಜೊತೆಗೆ, ಉಳಿದ 11,78,640 ರು. ಅನ್ನು ಶೇ.6ರಷ್ಟು ವಾರ್ಷಿಕ ಬಡ್ಡಿದರದೊಂದಿಗೆ ಆರು ವಾರದಲ್ಲಿ ಮೃತನ ಕುಟುಂಬದವರಿಗೆ ಪಾವತಿಸುವಂತೆ ವಿಮಾ ಕಂಪನಿಗೆ ಆದೇಶಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page