“ಮುಖ್ಯಮಂತ್ರಿಯವರೇ ಹೇಳಿದ ಮೇಲೆ ಇನ್ನೇನಿದೆ”: ಡಿಸಿಎಂ
“ನವೆಂಬರ್ ಕ್ರಾಂತಿ”ವಿಚಾರದ ನಡುವೆ ಸಂಚಲನ ಮೂಡಿಸಿದ ಸಿಎಂ, ಡಿಸಿಎಂ ಹೇಳಿಕೆ

ಮಂಗಳೂರು: ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಈವರೆಗೂ 5 ವರ್ಷ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಅವರ ಪಟ್ಟದ ಪಟ್ಟು ಇದೀಗ ಸಡಿಲವಾದಂತೆ ಭಾಸವಾಗುತ್ತಿದೆ. ಪವರ್ ಶೇರಿಂಗ್ ಬಗ್ಗೆ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ಹೈಕಮಾಂಡ್ ತೀರ್ಮಾನ ಮಾಡಿದರೆ 5 ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ.
ಐದು ವರ್ಷ ನಾನೇ ಸಿಎಂ ಎಂದು ರಾಜಣ್ಣ ಹೇಳಿದ್ದಾರೆ. ಅದು ಅವರ ಸ್ವಂತ ಅಭಿಪ್ರಾಯ. ಪ್ರಜಾಪ್ರಭುತ್ವದಲ್ಲಿ ಸ್ಪರ್ಧೆಯಲ್ಲಿರುವರನ್ನ ತಪ್ಪಿಸಲು ಅಗುವುದಿಲ್ಲ. ಸ್ಪರ್ಧೆಯಲ್ಲಿ ಇರಬಾರದು ಎಂದು ಹೇಳಲು ಆಗುವುದಿಲ್ಲ. ಪ್ರಜಾಪ್ರಭುತ್ವ ಹಕ್ಕು ಅವರದು. ಮುಖ್ಯಮಂತ್ರಿ ಆಕಾಂಕ್ಷಿ ಎನ್ನಬಹುದು. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.
ಇನ್ನು ಸಿಎಂ ಹೇಳಿಕೆಯ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ ,ಸಿಎಂ ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ ಎಂದಿದ್ದಾರೆ.








