
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಈ ವರ್ಷದ ಸೂಪರ್ ಹಿಟ್ ಚಲನಚಿತ್ರ ಕಾಂತಾರ ಚಾಪ್ಟರ್ 1 ಭರ್ಜರಿ ಯಶಸ್ವಿ ಕಂಡಿದ್ದು ಇದೀಗ ಒಟಿಟಿಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂದು ಕಾಯುತ್ತಿದ್ದ ಪ್ರೇಕ್ಷಕರಿಗೆ ಉತ್ತರ ಸಿಕ್ಕಿದೆ. ಅಕ್ಟೋಬರ್ 31 ರಂದು ಅಮೇಜಾನ್ ಪ್ರೈಮ್‌ನಲ್ಲಿ ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಪ್ರೈಮ್ ಅಧಿಕೃತವಾಗಿ ತಿಳಿಸಿದೆ.
ಕಾಂತಾರದ ಎಲ್ಲಾ ಭಾಷೆಗಳ ಒಟಿಟಿ ಹಕ್ಕುಗಳನ್ನು ಅಮೆಜಾನ್ ಪಡೆದುಕೊಂಡಿದ್ದರೂ ಹಿಂದಿ ಭಾಷೆಗೆ ಡಬ್ ಆಗಿರುವ ಸಿನಿಮಾ ರಿಲೀಸ್ ಆಗುತ್ತಿಲ್ಲ. ಉತ್ತರ ಭಾರತದ ಮಾರುಕಟ್ಟೆಯಲ್ಲಿ ಈಗಲೂ ಕಾಂತಾರ ಟಿಕೆಟ್‌ಗಳು ಸೇಲ್ ಆಗುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ ಕೊನೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಕಾಂತಾರ ಸಿನಿಮಾ ನಿರ್ಮಾಣಕ್ಕೆ ಅಂದಾಜು 125 ಕೋಟಿ ರೂ. ವೆಚ್ಚವಾಗಿದೆ ಎಂದು ಹೇಳಲಾಗುತ್ತಿದ್ದು ಇಲ್ಲಿಯವರೆಗೆ ಬಾಕ್ಸ್ ಆಫೀಸ್‌ನಲ್ಲಿ ಕಾಂತಾರ 809 ಕೋಟಿ ರೂ. ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಒಟಿಟಿ ಹಕ್ಕುಗಳನ್ನು ಅಮೇಜಾನ್ ಪ್ರೈಮ್ 125 ಕೋಟಿ ರೂ. ನೀಡಿ ಖರೀದಿಸಿದೆ ಎನ್ನಲಾಗುತ್ತಿದ್ದು ಕೆಜಿಎಫ್ ನಂತರ ಅತಿದೊಡ್ಡ ಮೊತ್ತಕ್ಕೆ ಡಿಜಿಟಲ್ ರೈಟ್ಸ್ ಮಾರಾಟವಾದ ಎರಡನೇ ಕನ್ನಡ ಚಿತ್ರ ಕಾಂತಾರವಾಗಿದೆ.



















































