27.3 C
Udupi
Monday, March 30, 2026
spot_img
spot_img
HomeBlogಮಹಿಳಾ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಜಯ ಸಾಧಿಸಿ ಫೈನಲ್ ಗೆ ಪ್ರವೇಶಿಸಿದ ಭಾರತೀಯ...

ಮಹಿಳಾ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಜಯ ಸಾಧಿಸಿ ಫೈನಲ್ ಗೆ ಪ್ರವೇಶಿಸಿದ ಭಾರತೀಯ ಕ್ರಿಕೆಟ್ ತಂಡ

ಮುಂಬೈ: ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ವಿಶ್ವಕಪ್‌ನ ರೋಚಕ ಎರಡನೇ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಮಣಿಸಿ ಫೈನಲ್‌ಗೆ ಪ್ರವೇಶಿಸಿ ಹೊಸ ಇತಿಹಾಸವನ್ನು ಬರೆದಿದೆ.

ಈ ಗೆಲುವು ಕ್ರಿಕೆಟ್ ಇತಿಹಾಸದ ಪುಸ್ತಕಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತೆ ಮಾಡಿದ್ದು ಇದು ಕೇವಲ ಭಾರತದ ಗೆಲುವಲ್ಲ, ಈ ಒಂದೇ ಪಂದ್ಯದಲ್ಲಿ ಹಲವಾರು ದಾಖಲೆಗಳು ಧೂಳೀಪಟವಾಗಿವೆ.

ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ತಂಡವು ಗ್ರೂಪ್ ಹಂತದಲ್ಲಿ ಅಸ್ಟ್ರೇಲಿಯಾ ಎದುರು 330 ರನ್ ಗಳಿಸಿದ ಹೊರತಾಗಿಯೂ ಮೂರು ವಿಕೆಟ್ ಅಂತರದ ಸೋಲು ಅನುಭವಿಸಿತ್ತು. ವಿಶಾಖಪಟ್ಟಣಂನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡವು ದಾಖಲೆಯ ಮೊತ್ತದ ಗುರಿ ಬೆನ್ನತ್ತುವಲ್ಲಿ ಯಶಸ್ವಿಯಾಗಿತ್ತು. ಆದರೆ ಇದೀಗ ಸೆಮೀಸ್‌ನಲ್ಲಿ ಆಸೀಸ್‌ ನೀಡಿದ್ದ 339 ರನ್‌ಗಳ ಗುರಿಯನ್ನು ಭಾರತ ಇನ್ನೂ 9 ಎಸೆತ ಬಾಕಿ ಇರುವಂತೆಯೇ ಗೆಲುವು ಸಾಧಿಸುವ ಮೂಲಕ ಸಿಹಿಯಾದ ಸೇಡು ತೀರಿಸಿಕೊಂಡಿದೆ. ಇದಷ್ಟೇ ಅಲ್ಲದೇ ಏಳು ಬಾರಿಯ ಚಾಂಪಿಯನ್ ತಂಡವನ್ನು ಟೂರ್ನಿಯಿಂದ ಹೊರದಬ್ಬಿದ ಭಾರತ ಇದೀಗ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಈ ಟೂರ್ನಿಯ ಲೀಗ್ ಹಂತದಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧ 331 ರನ್ ಚೇಸ್ ಮಾಡಿದ ದಾಖಲೆ ಈಗ ನುಚ್ಚುನೂರಾಗಿದೆ. ಆಸ್ಟ್ರೇಲಿಯಾ ನೀಡಿದ 339 ರನ್‌ಗಳ ಬೃಹತ್ ಗುರಿಯನ್ನು ಭಾರತ, ಜೆಮಿಮಾ ರೋಡ್ರಿಗ್ಸ್‌ ಅವರ ಅಜೇಯ ಶತಕ ಮತ್ತು ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಅರ್ಧಶತಕದ ನೆರವಿನಿಂದ 48.3 ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. 134 ಎಸೆತಗಳಲ್ಲಿ 127 ರನ್ ಗಳಿಸಿ ಜೆಮಿಮಾ ರೋಡ್ರಿಗ್ಸ್‌ ಅಜೇಯರಾಗಿ ಉಳಿದರೆ, ಅಮನ್‌ಜ್ಯೋತ್ ಕೌರ್ 8 ಎಸೆತಗಳಲ್ಲಿ 15 ರನ್ ಗಳಿಸಿ ಗೆಲುವಿಗೆ ಸಾಥ್ ನೀಡಿದರು. 88 ಎಸೆತಗಳಲ್ಲಿ 89 ರನ್ ಗಳಿಸಿದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಅರ್ಧಶತಕ, 16 ಎಸೆತಗಳಲ್ಲಿ 26 ರನ್ ಗಳಿಸಿದ ರಿಚಾ ಘೋಷ್ ಮತ್ತು 17 ಎಸೆತಗಳಲ್ಲಿ 24 ರನ್ ಗಳಿಸಿದ ದೀಪ್ತಿ ಶರ್ಮಾ ಅವರ ಇನ್ನಿಂಗ್ಸ್‌ಗಳು ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದವು. ಈ ಗೆಲುವಿನೊಂದಿಗೆ, ಈ ಬಾರಿ ಹೊಸ ಚಾಂಪಿಯನ್ ಸಿಗುವುದು ಖಚಿತವಾಗಿದೆ. ಭಾರತವು ಭಾನುವಾರ ಇದೇ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್‌ನಲ್ಲಿ ಸೆಣಸಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page