
ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಶಾಲೆಯಲ್ಲಿ ನವಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಾಡಿನ ಗೌರವ, ಭಾಷೆಯ ಮಹತ್ವ ಮತ್ತು ಸಂಸ್ಕೃತಿಯ ಶ್ರೀಮಂತಿಕೆಯನ್ನು ಸ್ಮರಿಸುವ ಸಲುವಾಗಿ ಈ ದಿನವನ್ನು ವಿಶೇಷವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಹಾಗೂ ನಾಡಗೀತೆಯನ್ನು ಹಾಡುವ ಮೂಲಕ ಪ್ರಾರಂಭಿಸಲಾಯಿತು. ವಿದ್ಯಾರ್ಥಿಯಾದ ಭುವನ್ ಮಾಲಾಜಿ ಕನ್ನಡ ರಾಜ್ಯೋತ್ಸವದ ಕುರಿತು ಮಾತನಾಡಿದರೆ, ವಿದ್ಯಾರ್ಥಿನಿಯರು ಹಾಡಿನ ಮೂಲಕ ತಾಯಿ ಭುವನೇಶ್ವರಿ ದೇವಿಗೆ ಗೀತ ನಮನವನ್ನು ಸಲ್ಲಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ವೀಣಾ ಶೆಣೈ, ಶಾಲಾ ಶಿಕ್ಷಕ -ಶಿಕ್ಷಕೇತರ ವೃಂದದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಭಾಷಾ ಶಿಕ್ಷಕರಾದ ರಾಕೇಶ್ ಕಾರ್ಯಕ್ರಮವನ್ನು ನಿರೂಪಿಸಿದರು.






















































