
ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ಯು ನಂದಿನ ತುಪ್ಪದ ದರ ಪ್ರತಿ ಕೆಜಿಗೆ ಏಕಾಏಕಿ 90 ರೂ. ಏರಿಕೆ ಮಾಡಿ ಶಾಕ್ ಕೊಟ್ಟಿದೆ.
ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದ್ದು ತುಪ್ಪ ಹೊರತುಪಡಿಸಿ ಇತರೇ ನಂದಿನಿ ಉತ್ಪನ್ನಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದೆ.






















































