
ಬೆಂಗಳೂರು: ದೇಶದಲ್ಲಿ ಸಂಭವಿಸಿದ ಅತೀ ದೊಡ್ಡ ಸ್ಫೋಟ ಪ್ರಕರಣದಲ್ಲಿ ದೆಹಲಿ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣ ಸಮೀಪ ಸಂಭವಿಸಿದ ಭಾರಿ ಸ್ಫೋಟವು ಒಂದಾಗಿದ್ದು 18 ಮಂದಿ ಮೃತಪಟ್ಟಿದ್ದರೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ನಿಲ್ಲಿಸಿದ್ದ ಎರಡು ಕಾರು ಸ್ಫೋಟಗೊಂಡಿದ್ದು ಇದು ಭಯೋತ್ಪಾದಕರ ಕೃತ್ಯ ಎಂದು ಶಂಕಿಸಲಾಗಿದೆ. ಈ ಘಟನೆ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ, ಇತ್ತ ಮುಂಬೈ ಹಾಗೂ ಕರ್ನಾಟಕದಾದ್ಯಂತ ಹೈ ಅಲರ್ಟ್ ಘೋಷಿಲಾಗಿದ್ದು ರಾಜ್ಯಾದ್ಯಂತ ಹೈ ಅಲರ್ಟ್ ಇರುವಂತೆ ಡಿಜಿ& ಐಜಿಪಿ ಸೂಚಿಸಿದ್ದಾರೆ. ರಾಜ್ಯದ ಸೂಕ್ಷ್ಮ ಪ್ರದೇಶ, ಜನ ನಿಭಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಚೀತಾ , ಹೊಯ್ಸಳ , ಬೀಟ್ ಪೊಲೀಸರು ಅಲರ್ಟ್ ಇರುವಂತೆ ಸೂಚಿಸಲಾಗಿದ್ದು ರಾಜ್ಯಾದ್ಯಂತ ಎಲ್ಲಾ ಎಸ್ ಪಿ ಗಳಿಗೂ ಡಿಜಿ ಕಚೇರಿಯಿಂದ ಸೂಚನೆ ನೀಡಲಾಗಿದೆ. ಕೂಡಲೇ ಠಾಣಾ ವ್ಯಾಪ್ತಿಯಲ್ಲಿ ಗಸ್ತು, ಕೇಂದ್ರ ಸರ್ಕಾರದ ಅಧೀನದ ಕಚೇರಿಗಳ ಭದ್ರತೆಗೆ ಸೂಚನೆ ನೀಡಲಾಗಿದೆ. ಅನುಮಾನಸ್ಪದ ವ್ಯಕ್ತಿಗಳ ಸ್ಥಳಗಳ ಮೇಲೆ ನಿಗಾ ಇಡುವಂತೆ ಸೂಚಿಸಿದ್ದು ಲಾಡ್ಜ್ನಲ್ಲಿ ತಂಗಿರೋ ಹೊರ ರಾಜ್ಯದವರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಇದರ ಜೊತೆಗೆ ರಾತ್ರಿಯೂ ಗಸ್ತು ಹೆಚ್ಚಳ, ಬಸ್ ನಿಲ್ದಾಣ ಮೆಟ್ರೋ ನಿಲ್ದಾಣಗಳಲ್ಲೂ ನಿಗಾ ಇಡಲು ಸೂಚಿಸಲಾಗಿದೆ. ನಗರ ಪೊಲೀಸ್ ಆಯುಕ್ತರಿಂದ ನಗರದ ಎಲ್ಲಾ ಇನ್ಸ್ಪೆಕ್ಟರ್,ಎಸಿಪಿ,ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ.









