ಟ್ವೀಟ್ ಮೂಲಕ ಸಂತಸ ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ್ದು ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಪ್ರಧಾನಿ, ಉತ್ತಮ ಆಡಳಿತ, ಅಭಿವೃದ್ಧಿ, ಸಾರ್ವಜನಿಕ ಕಲ್ಯಾಣದ ಮನೋಭಾವ, ಸಾಮಾಜಿಕ ನ್ಯಾಯ ಗೆದ್ದಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.
2025 ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಐತಿಹಾಸಿಕ ಮತ್ತು ಅಭೂತಪೂರ್ವ ಗೆಲುವಿನೊಂದಿಗೆ ಆಶೀರ್ವದಿಸಿದ್ದಕ್ಕಾಗಿ ಬಿಹಾರದ ನನ್ನ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.






















































