
ಬೆಂಗಳೂರು: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಅವರು ನಿಧನ ಹೊಂದಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ‘ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ತಿಮ್ಮಕ್ಕ ಅವರ ಕೊನೇ ಆಸೆಯ ಪತ್ರದಲ್ಲಿ ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯ ಮಾಡಬೇಕು ಎಂದು ಬರೆದಿದ್ದಾರೆ. ಈ ಕುರಿತು ಸರ್ಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸರ ಸಂರಕ್ಷಣೆ ವಿಚಾರದಲ್ಲಿ ತಿಮ್ಮಕ್ಕ ಅವರ ಸಾಧನೆ ಅಪಾರ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.






