27 C
Udupi
Wednesday, June 10, 2026
spot_img
spot_img
HomeBlogಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಉಡುಪಿಯಲ್ಲಿ ಅದ್ಧೂರಿ ಸ್ವಾಗತ

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಉಡುಪಿಯಲ್ಲಿ ಅದ್ಧೂರಿ ಸ್ವಾಗತ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಗೌಡ ರವರು ತನ್ನ ರಾಜ್ಯ ವ್ಯಾಪಿ ವಿಧಾನಸಭಾ ಕ್ಷೇತ್ರ ಭೇಟಿ ಕಾರ್ಯಕ್ರಮ ನಿಮಿತ್ತ ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾರ್ಯಕ್ರಮಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಹಾಗೂ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ವಿ ಅಮೀನ್ ರವರು ಅದ್ಧೂರಿಯಾಗಿ ಸ್ವಾಗತಿಸಿದರು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮಂಜುನಾಥ್ ಗೌಡ ಅವರು, ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿ, ಪಕ್ಷವನ್ನ ಬಲಿಷ್ಠಗೊಳಿಸಲಾಗುವುದು. ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಉತ್ತೇಜನ ನೀಡುವ ಕೆಲಸ ಮಾಡಲಾಗುತ್ತದೆ.


ಮಾತ್ರವಲ್ಲದೆ ರಾಜ್ಯ ಸರ್ಕಾರದ ೫ ಗ್ಯಾರಂಟಿಗಳನ್ನ ಮನೆ ಮನೆಗೆ ತಲುಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು… ಇನ್ನು ಬಿಹಾರದಲ್ಲಿ ಮತಕಳ್ಳತನ ಮೂಲಕ ಆಡಳಿತ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಮಂಗಳೂರಿನ ಸುರತ್ಕಲ್ ನಲ್ಲಿ ಇಂದು ಸಂಜೆ ದೊಡ್ಡ ಮಟ್ಟಿನ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.

ಈ ವೇಳೆ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಸೇರಿದಂತೆ ಮೊದಲಾದವರು ಮಂಜುನಾಥ ಗೌಡ ಅವರು ಜೊತೆಯಲ್ಲಿದ್ದರು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಜ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸುರಯ್ಯ ಅಂಜುಮ್ ,ಅಜಿತ್ ಶೆಟ್ಟಿ,ಕಲ್ಯಾಣ್, ಅನಿಲ್,ಅಭಿನಂದನ್,ಪ್ರಸಾದ್ ಪಂಜೆ ,ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ ಶೆಟ್ಟಿ , ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಕರ್ಕೇರ, ನವೀನ್ ಸಾಲಿಯಾನ್ , ನವೀನ್ ಬಂಗೇರ ,ರಚನ್ಸಾ
ಸಾಲಿಯಾನ್,ಪ್ರವೇಶ್ ಶೆಟ್ಟಿ, ಶಶಿ ಶರ್ಮಾ, ಅಪ್ಪು ಶೆಟ್ಟಿ, ಉದಯ್ ಆಚಾರ್ಯ,ಪ್ರಶಾಂತ್,ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page