
ಕಾರ್ಕಳ : ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ 2025/26 ನೇ ಸಾಲಿನ ಪೂರ್ವ ಪ್ರಾಥಮಿಕ ಶಾಲಾ ಕ್ರೀಡೋತ್ಸವವು ನ.20 ರಂದು ನಡೆಯಿತು.
ಈ ಕಾರ್ಯಕ್ರಮಕ್ಕೆ ಕಾರ್ಕಳ ತಾಲೂಕಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಘದ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಪೈ ಇವರು ಆಗಮಿಸಿ, ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಕ್ಕಳಿಗೆ ಶುಭ ಹಾರೈಸಿದರು. ಮಕ್ಕಳು ವಿವಿಧ ಬಗೆಯ ಕ್ರೀಡೆಗಳಲ್ಲಿ ಸ್ಪರ್ಧಿಸಿ ಸಂಭ್ರಮಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿಜೇತರಾದ ಮಕ್ಕಳಿಗೆ ಪದಕ ಹಾಗೂ ಪ್ರಮಾಣ ಪತ್ರಗಳನ್ನು ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್ ಕಾಮತ್, ಪೂರ್ವ ಪ್ರಾಥಮಿಕ ಶಾಲಾ ಸಂಯೋಜಕರಾದ ಶ್ರೀಮತಿ ಚಿತ್ರ ಶೆಣೈ , ಶಿಕ್ಷಕವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹ ಶಿಕ್ಷಕಿ ಶ್ರೀಮತಿ ಭವಾನಿ ನಿರೂಪಿಸಿ, ಯುಕೆ ಜಿ ವಿದ್ಯಾರ್ಥಿನಿ ಅನ್ವಿಕ್ಷಭಟ್ ಸ್ವಾಗತಿಸಿ, ಎಲ್ ಕೆ ಜಿ ವಿದ್ಯಾರ್ಥಿನಿ ಶ್ರೀನಿಕ ವಂದಿಸಿದರು.






















































