
ಕುಂದೂರು: ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಕುಂದೂರಿನ ಬಿಜಿಎಸ್ ಮಠದಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಹಂಚಿಕೆ ಕುರಿತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿ ಡಿಕೆಶಿ ಅವರು ಉಳಿದ ಎರಡೂವರೆ ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಬೇಕು ಎಂಬ ಅಭಿಲಾಷೆ ನಮಗಿದೆ ಎಂದು ಹೇಳಿದ್ದಾರೆ.
ಡಿಕೆ ಶಿವಕುಮಾರ್ ಅವರು ಸಿಎಂ ಆಗುವ ಆಕಾಂಕ್ಷಿಯಾಗಿದ್ದು, ಪ್ರಸ್ತುತ ಡಿಸಿಎಂ ಆಗಿದ್ದಾರೆ. ನಮಗೆ ಎರಡೂವರೆ ವರ್ಷ ಆದ ಮೇಲೆ ನಮ್ಮ ಸಮುದಾಯದವರು ಸಿಎಂ ಆಗುತ್ತಾರೆ ಎಂದು ಅಂದುಕೊಂಡಿದ್ದೆವು. ಡಿಕೆ ಶಿವಕುಮಾರ್ ಶಿಸ್ತಿನ ಸಿಪಾಯಿ ಹಾಗೂ ಪಕ್ಷದ ಏಳಿಗೆಗಾಗಿ ದುಡಿದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಸಾವಿರಾರು ಭಕ್ತರು ಮಠಕ್ಕೆ ಕರೆ ಮಾಡಿ ತಮ್ಮ ಆಸೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ ಅವರು ರಾಜ್ಯದ ಹಿತದೃಷ್ಟಿಯಿಂದ ಹೈಕಮಾಂಡ್ ಈ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಆಗ್ರಹಿಸಿದರು.






















































