
ಇತ್ತೀಚೆಗೆ ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ನಟ ರಣ್‌ವೀರ್ ಸಿಂಗ್ ಕಾಂತಾರ-1 ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದ ವೇಳೆ ದೈವಕ್ಕೆ ದೆವ್ವ ಎಂದು ಹೇಳಿದ್ದಲ್ಲದೆ ಅನುಕರಣೆ ಕೂಡ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಭಾರಿ ಆಕ್ರೋಶ ವ್ಯಕ್ತವಾಗಿದ್ದು ಇದೀಗ ತಮ್ಮ ವರ್ತನೆ ಮತ್ತು ಹೇಳಿಕೆಗೆ ರಣ್‌ವೀರ್ ಸಿಂಗ್ ಸೋಶಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಕಾಂತಾರ-1 ಸಿನಿಮಾದಲ್ಲಿನ ರಿಷಭ್ ಶೆಟ್ಟಿಯವರ ಅದ್ಭುತವಾದ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಈ ರೀತಿಯಾಗಿ ನಟಿಸಲು ಎಷ್ಟು ಪರಿಶ್ರಮ ಬೇಕಾಗುತ್ತೆ ಎಂಬುವುದು ಓರ್ವ ನಟನಾಗಿ ನನಗೆ ಗೊತ್ತಿದೆ. ರಿಷಭ್ ನಟನೆಗೆ ಮೆಚ್ಚುಗೆ ಸೂಚಿಸಿದ್ದೇನೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ಯಾರ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.





