
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ನಾಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಆಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು ಬೆಂಗಳೂರು ನಗರದಲ್ಲಿ, ಮೋಡ ಕವಿದ ವಾತಾವರಣವಿರಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಶಿವಮೊಗ್ಗ ಹಾಸನ ಕೊಡಗು ಚಾಮರಾಜನಗರ ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.



















