
ಕಾರ್ಕಳ : ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ 4.30 ರ ಸುಮಾರಿಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವ ಪುರುಷ ಪೊಲೀಸ್ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವಿನಂತಿಸಿಕೊಳ್ಳುತೇನೆ ಎಂದು ರಮಿತ ಸೂರ್ಯವಂಶಿ ತಿಳಿಸಿದ್ದಾರೆ.
ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೋಲಿಸರು ನುಗ್ಗಿ, ಅಕ್ಷತಾ ಪೂಜಾರಿ ಎಂಬ ಮುಗ್ಧ ಯುವತಿಗೆ ಹಲ್ಲೆ ನಡೆಸಿದ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸರಿಗೆ ದೂರು ಕೊಟ್ಟಾಗ ಠಾಣಾಧಿಕಾರಿ ಆಕೆಯ ಕೇಸನ್ನು ದಾಖಲಿಸದೆ ಪೊಲೀಸರನ್ನು ರಕ್ಷಿಸುವ ಸಲುವಾಗಿ ಅಕ್ಷತಾ ಪೂಜಾರಿ ಮತ್ತು ಆಕೆಯ ತಾಯಿಯ ಮೇಲೆ ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಕೇಸು ದಾಖಲಿಸಿದ್ದು ಎಷ್ಟು ಸರಿ. ?? ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕೇಸು ದಾಖಲಿಸಿ ಯುವತಿಗೆ ನ್ಯಾಯ ಒದಗಿಸಬೇಕು. ಅಕ್ಷತಾ ಪೂಜಾರಿ ಅವರ ಜೊತೆ ಹಿಂದೂ ಸಮಾಜ ಜೊತೆಯಾಗಿ ನಿಲ್ಲುವ ಅಗತ್ಯ ಇದೆ. ಅಲ್ಲಿ ಆಗಿರುವ ಘಟನೆ ಪುನರಾವರ್ತನೆ ಆಗಬಾರದು ಈ ಕಾನೂನು ವ್ಯವಸ್ಥೆಯಲ್ಲಿ ಮಹಿಳೆಯರಿಗೆ ರಕ್ಷಣೆ ಕೊಡಬೇಕಾಗಿರುವ ಆರಕ್ಷಕರು ರಕ್ಷಕರಾಗಿ ಇರಬೇಕು ನಿಮ್ಮ ಇಲಾಖೆ ಮೇಲೆ ಇರುವ ನಂಬಿಕೆಯನ್ನು ಉಳಿಸಿಕೊಳ್ಳಿ ಎಂದು ಸಮಾಜ ಸೇವಕಿ ರಮಿತ ಸೂರ್ಯವಂಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





