
ಭಾರತ್ ಸ್ಕೌಟ್ಸ್ ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಸ್ಥಳೀಯ ಸಂಸ್ಥೆ ಕಾರ್ಕಳ ಹಾಗೂ ಶ್ರೀ ಶ್ರೀ ರವಿಶಂಕರ ವಿದ್ಯಾ ಮಂದಿರ ಕಾರ್ಕಳ ಇವರ ಸಹಯೋಗದಲ್ಲಿ ಕಾರ್ಕಳ ತಾಲೂಕು ಸ್ಕೌಟ್ಸ್ ಗೈಡ್ಸ್ ಮೇಳವು ಶ್ರೀ ಶ್ರೀ ರವಿಶಂಕರ ವಿದ್ಯಾ ಮಂದಿರ ಕಾರ್ಕಳ ಇಲ್ಲಿ ಜರುಗಿತು.
ಕಾರ್ಯಕ್ರಮವು ಧ್ವಜ ವಂದನೆಯೊಂದಿಗೆ ಆರಂಭಗೊಂಡಿತ್ತು. ಬಳಿಕ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಭೆಯ ಅಧ್ಯಕ್ಷತೆಯನ್ನು ಕಾರ್ಕಳ ತಾಲೂಕು ಸ್ಕೌಟ್ ಗೈಡ್ಸ್ ಘಟಕದ ಅಧ್ಯಕ್ಷೆ ಜ್ಯೋತಿ ಜೆ ಪೈ ವಹಿಸಿದ್ದರು. ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಸ್ಕೌಟ್ಸ್ ಗೈಡ್ಸ್ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ನೆರವೇರಿಸಿ ವಿದ್ಯಾರ್ಥಿಗಳನ್ನು ಪ್ರಶಂಸಿಸಿ ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಮೈಸೂರು ವಿಭಾಗದ ಸ್ಕೌಟ್ಸ್ ಗೈಡ್ಸ್ ಕಮೀಷನರ್ ಡಾ. ಎಂ ಮೋಹನ ಆಳ್ವ ಹಿರಿಯ ಲೆಕ್ಕ ಪರಿಶೋಧಕ ಕಮಲಾಕ್ಷ ಕಾಮತ್ ಆಗಮಿಸಿ ವಿದ್ಯಾರ್ಥಿಗಳ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಕಾರ್ಕಳ ಸ್ಥಳೀಯ ಸಂಸ್ಥೆ ಉಪಾಧ್ಯಕ್ಷರಾದ ಸಾವಿತ್ರಿ ಮನೋಹರ್ ಜಗದೀಶ್ ಹೆಗ್ಡೆ ಕೋಶಾಧಿಕಾರಿ ಸತೀಶ್ ಶೆಟ್ಟಿ ರಾಜ್ಯ ಸಹ ಸಂಘಟಕರಾದ ಸುಮನಾ ಶೇಖರ ಹಿರಿಯ ಗೈಡ್ ಯಶೋಧಾ ಹೆಗ್ಡೆ ಜೊತೆ ಕಾರ್ಯದರ್ಶಿ ಸೀಮಾ ಕಾಮತ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರವಿಶಂಕರ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಸೋನಾಲ್ ಕಾಮತ್ ಸ್ವಾಗತಿಸಿ ಶಿಬಿರ ನಾಯಕಿ ಶಿಕ್ಷಕಿ ಚಿತ್ರಾ ಪೈ ದಿನದ ಕಾರ್ಯಕ್ರಮದ ಮುನ್ನೋಟ ನೀಡಿದರು. ಶಿಕ್ಷಕಿ ಭವಾನಿ ಸ್ವಾಗತಿಸಿ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಗಣೇಶ್ ಜಾಲ್ಸೂರು ಧನ್ಯವಾದವಿತ್ತರು.

ಬಳಿಕ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಪೇಪರ್ ಕ್ರಾಫ್ಟ್ ಚಿತ್ರಕಲೆ ಜಾನಪದ ನೃತ್ಯ ರಸ ಪ್ರಶ್ನೆ ಮೂಕಾಭಿನಯ ವಿವಿಧತೆಯಲ್ಲಿ ಏಕತೆ ಬೆಂಕಿ ಬಳಸದೇ ತಿಂಡಿ ತಯಾರಿ ಚಟುವಟಿಕೆ ಮೇಳದಲ್ಲಿ ಆಯೋಜಿಸಲಾಯಿತು. ತಾಲೂಕಿನ ವಿದ್ಯಾರ್ಥಿಗಳು ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.






