29.2 C
Udupi
Friday, December 19, 2025
spot_img
spot_img
HomeBlogಮಂಗಳೂರು: ಹೊಸ ವರ್ಷ ಆಚರಣೆಗೆ ಖಡಕ್ ಎಚ್ಚರಿಕೆ ನೀಡಿ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ

ಮಂಗಳೂರು: ಹೊಸ ವರ್ಷ ಆಚರಣೆಗೆ ಖಡಕ್ ಎಚ್ಚರಿಕೆ ನೀಡಿ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ

ಮಂಗಳೂರು: ಹೊಸ ವರ್ಷಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ಮಂಗಳೂರು ಪೊಲೀಸ್‌ ಆಯುಕ್ತ ಸುಧೀರ್‌ ಕುಮಾರ್‌ ರೆಡ್ಡಿ ಹೊಸ ವರ್ಷಾಚರಣೆ ಆಯೋಜನೆ ಮಾಡುವ ಹೊಟೇಲ್‌ಗಳು, ರೆಸ್ಟೋರೆಂಟ್‌ ಗಳು, ಕ್ಲಬ್‌ಗಳು, ರೆಸಾರ್ಟ್‌ಗಳು ಮತ್ತು ಇತರೆ ಸಂಸ್ಥೆಗಳು ಕಾರ್ಯಕ್ರಮಗಳನ್ನು ಆಯೋಜಿಸಲು ಕಡ್ಡಾಯವಾಗಿ ಮಂಗಳೂರು ನಗರ ಪೊಲೀಸ್‌ ಕಮಿಷನರಟ್‌ ವ್ಯಾಪ್ತಿಯ ಸಹಾಯಕ ಪೊಲೀಸ್‌ ಆಯುಕ್ತರ ಕಚೇರಿಯಿಂದ ಪೂರ್ವ ಅನುಮತಿ ಪಡೆಯಬೇಕು ಎಂದು ಸೂಚಿಸಿದ್ದಾರೆ.

  • ಡಿ.23ರ ಸಂಜೆ 5 ಗಂಟೆಯೊಳಗೆ ಅನುಮತಿಗಾಗಿ ಅರ್ಜಿಗಳನ್ನು ಸಲ್ಲಿಸಿ ಅನುಮತಿ ಪಡೆದುಕೊಳ್ಳಬೇಕು.
  • ಪೂರ್ವಾನುಮತಿ ಇಲ್ಲದ ಹೊಸ ವರ್ಷದ ಆಚರಣೆಗಳನ್ನು ಆಯೋಜಿಸಲು ಅನುಮತಿ ನೀಡಲಾಗುವುದಿಲ್ಲ.
  • ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು.
  • ಹೊಸ ವರ್ಷ ಕಾರ್ಯಕ್ರಮ ರಾತ್ರಿ 12.30ರ ಒಳಗಾಗಿ ಪೂರ್ಣಗೊಳ್ಳಬೇಕು.
  • ಧ್ವನಿ ಮುದ್ರಣ ವ್ಯವಸ್ಥೆಗಳು, ಲೌಡ್‌ ಸ್ಪೀಕರ್‌ ಬಳಸಲು ಸಂಬಂಧಪಟ್ಟ ಪ್ರಾಧಿಕಾರದಿಂದ ಪೂರ್ವ ಅನುಮತಿ ಪಡೆಯಬೇಕು.
  • ಧ್ವನಿಯ ಮಟ್ಟ ಶಬ್ದಮಾಲಿನ್ಯ ನಿಯಮಗಳು 2000 ಮತ್ತು ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಅನುಸರಿಸಬೇಕು.
  • ಡಿಜೆ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
  • ಹೊಸ ವರ್ಷಾಚರಣೆ ಕಾರ್ಯಕ್ರಮಗಳಲ್ಲಿ ಯಾವುದೇ ಕಾರಣಕ್ಕೂ ನಿಷೇದಿತ ಮಾದಕ ವಸ್ತುಗಳ ಸಂಗ್ರಹಣೆ ಮತ್ತು ಸೇವನೆಯನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
  • ಹೊಸ ವರ್ಷಾಚರಣೆ ನೆಪದಲ್ಲಿ ಅಶ್ಲೀಲ ನೃತ್ಯಗಳು, ಅರೆನಗ್ನ ಪ್ರದರ್ಶನಗಳು, ಜೂಜು ಹಾಗೂ ಇತರ ಅನೈತಿಕ ಚಟುವಟಿಕೆಗಳನ್ನು ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
  • ಮದ್ಯ ಮಾರಾಟ ಮತ್ತು ವಿತರಣೆಗೆ ಸ್ಥಳೀಯ ಅಬಕಾರಿ ಇಲಾಖೆಯಿಂದ ಲಿಖಿತ ಅನುಮತಿ ಕಡ್ಡಾಯವಾಗಿ ಪಡದುಕೊಂಡಿರಬೇಕು.
  • ಆಯೋಜಕರು ಸಂಬಂಧಿತ ಇಲಾಖೆಗಳಿಂದ ಪಡೆದ ಲೈಸನ್ಸ್‌ ಮತ್ತು ಅನುಮತಿ ಪ್ರಕಾರ ನಿರ್ಧರಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
  • ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣಗಳು, ಉದ್ಯಾನಗಳು, ಕ್ರೀಡಾಂಗಣಗಳು, ರೈಲ್ವೆ ನಿಲ್ದಾಣಗಳು ಮತ್ತು ಇತರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮತ್ತು ಮದ್ಯಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
  • ವಿದ್ಯಾರ್ಥಿಗಳು ಅಥವಾ ಯುವಕರು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸಿ ಕಿಡಿಗೇಡಿತನವನ್ನು ಪ್ರದರ್ಶನ ಮಾಡಿದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
  • ಸಾರ್ವಜನಿಕ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಆಯೋಜಕರು ಪ್ರತ್ಯೇಕವಾಗಿ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಬೇಕು.
  • ಸ್ಟಂಟ್‌ ಚಟುವಟಿಕೆಗಳು, ವ್ಹೀಲಿಂಗ್‌, ಡ್ರಾಗ್‌ ರೇಸಿಂಗ್‌, ವೇಗದ ಚಾಲನೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
  • ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಸಮುದ್ರ ಬದಿಗಳಲ್ಲಿ ಮದ್ಯ ಸೇವಿಸುವುದು, ಅಶ್ಲೀಲ ವರ್ತನೆಗಳು, ಇತರ ಅಶ್ಲೀಲ ಪ್ರದರ್ಶನಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
  • ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ರೀತಿಯಲ್ಲಿ ಪಟಾಕಿ ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್‌ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page