
ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣದಲ್ಲಿ ಏರಿಕೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಕಲಬುರಗಿ ,ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಮಂಡ್ಯ ,ರಾಮನಗರ, ಶಿವಮೊಗ್ಗ, ಹಾಸನ ,ಕೊಡಗು, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿಯಲ್ಲಿ ಚಳಿಯ ಪ್ರಮಾಣ ಏರಿಕೆಯಾಗಿದ್ದು, ಮಕ್ಕಳು ಮತ್ತು ವೃದ್ಧರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.





