
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಸುಕಿನ ಜಾವ ಬಸ್ ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 17 ಮಂದಿ ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ.
ನಸುಕಿನ ಜಾವ 3 ಗಂಟೆಗೆ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ಸಿಗೆ ಎದುರಿನಿಂದ ಬರುತ್ತಿದ್ದ,, ಕಂಟೇನರ್ ಲಾರಿ ಡಿವೈಡರ್ ಹಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿಗೆ ಬೆಂಕಿ ಹತ್ತಿಕೊಂಡಿದ್ದು ಬಸ್ಸು ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಕನಿಷ್ಠ 17 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ.
ಘಟನೆಯ ಮಾಹಿತಿ ದೊರೆತ ತಕ್ಷಣ ಚಿತ್ರದುರ್ಗ ಜಿಲ್ಲೆಯ ಡಿವೈಎಸ್ಪಿ ,ರೂರಲ್ ಇನ್ಸ್ಪೆಕ್ಟರ್ ಹಾಗೂ ಚಿತ್ರದುರ್ಗ ಜಿಲ್ಲೆಯ ಎಸ್ಪಿ ಮತ್ತು ತುಮಕೂರು ಎಸ್ ಪಿ , ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ತಕ್ಷಣ ಕಾರ್ಯಗಳನ್ನು ನಡೆಸಿದ್ದಾರೆ. ಗಾಯಾಳುಗಳನ್ನು ಹಿರಿಯೂರು, ಶಿರಾ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ರಕ್ಷಿಸಲ್ಪಟ್ಟವರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.





