
ಕ್ಷೇತ್ರ ಶಿಕ್ಷಣಾದಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಶಾಲಾ ಶಿಕ್ಷಣಾ ಇಲಾಖೆ ಕಾರ್ಕಳ ತಾಲೂಕು, ಹಾಗೂ ಕ್ರೈಸ್ಟ್ ಕಿಂಗ್ ವಿದ್ಯಾ ಸಂಸ್ಥೆಯ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಒಂಬತ್ತನೇ ತರಗತಿಯ ಕುಮಾರಿ ಶ್ರಾವಣಿ ಭಟ್ ಸಂಸ್ಕೃತ ಭಾಷಣದಲ್ಲಿ ಪ್ರಥಮ ಸ್ಥಾನ ಹಾಗೂ ಭರತನಾಟ್ಯದಲ್ಲಿ ದ್ವಿತೀಯ ಸ್ಥಾನ ಮತ್ತು ಏಳನೇ ತರಗತಿಯ ಕುಮಾರಿ ಐಶ್ವರ್ಯ ಪೈ ಸಂಸ್ಕೃತ ಕಂಠಪಾಠದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಏಳನೇ ತರಗತಿಯ ಆರಾಧ್ಯ ಶೆಟ್ಟಿ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಇವರಿಗೆ ಶಾಲಾ ಅಧ್ಯಕ್ಷರು ಮತ್ತು ಸದಸ್ಯರು, ಮುಖ್ಯೋಪಾಧ್ಯರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು..





