
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತಿನ ಹಣವು ಹೊಸ ವರ್ಷದ ಆರಂಭದಲ್ಲಿ ಬರಬಹುದೆಂದು ನಿರೀಕ್ಷಿಸಿದ ಮಹಿಳೆಯರಿಗೆ ಇದೀಗ ತಾಂತ್ರಿಕ ದೋಷದಿಂದ ನಿರಾಸೆಯಾಗಿದೆ.
ಸರ್ಕಾರವು ಬಾಕಿ ಹಣವನ್ನು ಪಾವತಿಸಲು ಶತಪ್ರಯತ್ನ ನಡೆಸುತ್ತಿದ್ದು ಆದರೆ, ಬೃಹತ್ ಮೊತ್ತದ ಹಣದ ಹರಿವು ಮತ್ತು ತಾಂತ್ರಿಕ ಕಾರಣಗಳಿಂದಾಗಿ ಪ್ರಕ್ರಿಯೆ ವಿಳಂಬವಾಗುತ್ತಿದೆ. ಇದರಿಂದಾಗಿ ಪ್ರತಿ ತಿಂಗಳು 2000 ರೂಪಾಯಿ ನಂಬಿಕೊಂಡಿದ್ದ ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ.
ಆದರೆ ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಎಂದು ಮಹಿಳೆಯರು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಇದೀಗ ‘181’ ಸಹಾಯವಾಣಿಯನ್ನು ಆರಂಭಿಸಿದೆ. ಇನ್ನು ಮುಂದೆ ಹಣ ಜಮೆಯಾಗದ ಬಗ್ಗೆ ಮಹಿಳೆಯರು ಕಚೇರಿಗೆ ಹೋಗದೆ 181 ಕ್ಕೆ ಕರೆ ಮಾಡಿದರೆ, ಸಂಬಂಧಪಟ್ಟ ಅಧಿಕಾರಿಗಳು ನಿಮ್ಮ ತಾಲೂಕಿನ ಮಾಹಿತಿ ಪಡೆದು ಸಮಸ್ಯೆಗೆ ಇರುವ ಕಾರಣ ಮತ್ತು ಪರಿಹಾರದ ಬಗ್ಗೆ ಮಾಹಿತಿ ನೀಡಲಿದ್ದಾರೆ.





